ನೆಲದ ಮೇಲೆ ಕೂತು ಪಾಠ ಕೇಳುವ ವ್ಯವಸ್ಥೆಗೆ ವಿದಾಯ ಹೇಳಲು ಸರ್ಕಾರ ಮುಂದು!

ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭಾನುವಾರ ಹೇಳಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭಾನುವಾರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲೂ ಮಕ್ಕಳ ಕೈಯಲ್ಲಿ ಶೌಚ ಸ್ವಚ್ಚತೆ ಮಾಡಿಸುವಂತಿಲ್ಲ. ಹಾಗೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಅಲ್ಲದೇ ಇನ್ನು ಮುಂದೆ ಶಾಲಾ ಸ್ವಚ್ಚತೆಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ. ಇನ್ನು ಎಲ್ಲಾ ಶಾಲೆಯಲ್ಲೂ ಮುಂದಿನ ವರ್ಷದಿಂದ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. 1 ರಿಂದ 10ನೇ ತರಗತಿ ವರೆಗೆ ಮಕ್ಕಳು ತರಗತಿಗಳಲ್ಲಿ ಬೆಂಚ್‌ ಮೇಲೆಯೇ ಕುಳಿತು ಪಾಠ ಕೇಳಬೇಕು. ಈ ಸಂಬಂಧ ಅಂತಿಮ ಆದೇಶ ಹೊರಡಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೊಳ್ಳಲಿದೆ ಎಂದು ಹೇಳಿದರು.

1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಬೆಂಚ್‌ಗಳ ಮೇಲೆ ಕುಳಿತೇ ಪಾಠ ಕೇಳಲಿದ್ದಾರೆ. ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಗತ್ಯ ಪೀಠೋಪಕರಣಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು.

ಶಾಲಾ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಬಾರದು. ಮಕ್ಕಳಿಂದ ಕ್ಲೀನ್ ಮಾಡಿಸುವುದು ತಪ್ಪು. ಹಾಗೇನಾದರೂ ಮಾಡಿದ್ರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ. ಸ್ವಚ್ಛತೆಗೆಂದೇ ಡಿ ಗ್ರುಪ್ ನೌಕರರ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿದೆ. ಗುತ್ತಿಗೆ ಆಧಾರದಲ್ಲಿ ಡಿ-ಗ್ರೂಪ್ ಸಿಬ್ಬಂದಿ ನೇಮಕಕ್ಕೆ ಸಿಎಂ ಜೊತೆ ಚರ್ಚಿಸಿ, ತೀರ್ಮಾನ ಮಾಡುತ್ತೇವೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com