ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಸಿದ್ದರಾಮಯ್ಯ ಹೇಳಿಕೆ ಹಿಂದೆ ರಾಹುಲ್ ಗಾಂಧಿ ಪ್ರಭಾವವಿದೆ: ಪ್ರಲ್ಹಾದ ಜೋಶಿ

ಹಿಜಾಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಖಂಡನೀಯ. ಯಾರೂ ಅದನ್ನು ನಿಷೇಧಿಸಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಹೇಳಿದ್ದಾರೆ.
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹಿಜಾಬ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಖಂಡನೀಯ. ಯಾರೂ ಅದನ್ನು ನಿಷೇಧಿಸಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಭಾನುವಾರ ಹೇಳಿದ್ದಾರೆ.

'ಸಿದ್ದರಾಮಯ್ಯ ಅವರು ತಮ್ಮ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹಿಂದಿರುಗಿದಾಗ ಆಗಾಗ್ಗೆ ಇಂತಹ ಸುಳ್ಳುಗಳನ್ನು ಹೇಳುತ್ತಾರೆ. ರಾಹುಲ್ ಗಾಂಧಿ ಪ್ರಭಾವವೇ ಸಿಎಂ ಈ ರೀತಿ ಮಾತನಾಡುವಂತೆ ಮಾಡಿದೆ' ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. 

'ಸಿಎಂ ಸಿದ್ದರಾಮಯ್ಯ ಅವರು ಸಮಸ್ಯೆಯ ವಾಸ್ತವಾಂಶವನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ, ಅವರು ಪ್ರತಿಕ್ರಿಯಿಸಬಾರದು ಅಥವಾ ಹೇಳಿಕೆ ನೀಡಬಾರದು. ಸಿದ್ದರಾಮಯ್ಯ ಸಿಎಂ ಆಗಲು ಅನರ್ಹರು' ಎಂದು ದೂರಿದರು.

ಸಿದ್ದರಾಮಯ್ಯ ಅವರು ಅಸಂಬದ್ಧ ಹೇಳಿಕೆ ನೀಡುವ ಮೂಲಕ ಸಮುದಾಯಗಳ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. 'ಶಿಕ್ಷಣ ಸಂಸ್ಥೆಗಳಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂಬುದು ಸತ್ಯ. ಅವರು ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದರೆ, ಅವರು ಮತಗಳ ಕ್ರೋಢೀಕರಿಸಲು ಸಮುದಾಯಗಳ ನಡುವೆ ಘರ್ಷಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಸಚಿವರು ಆರೋಪಿಸಿದರು.

'ಕೆಲವು ವಿದ್ಯಾರ್ಥಿನಿಯರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ದಿದ್ದಾರೆ ಮತ್ತು ನ್ಯಾಯಾಲಯದ ನಿರ್ಧಾರವನ್ನು ಅನುಸರಿಸಬೇಕು. ಜನರು ಬುದ್ಧಿವಂತರು ಮತ್ತು ಅವರಿಗೆ ದೇಶದಲ್ಲಿ ಏನು ನಡೆಯುತ್ತಿದೆ ಎಂದು ತಿಳಿದಿದೆ. ಅವರು ತಕ್ಕ ಪಾಠ ಕಲಿಸುತ್ತಾರೆ' ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com