ಬರ ಬರಲಿ ಎಂಬುದೇ ರೈತರ ಬಯಕೆ: ಸಚಿವ ಶಿವಾನಂದ ಪಾಟೀಲ್ ರಾಜೀನಾಮೆಗೆ ಕಬ್ಬು ಬೆಳೆಗಾರರ ಆಗ್ರಹ

ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರನ್ನು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ವಜಾಗೊಳಿಸಬೇಕು ಎಂದು ಕಬ್ಬು ಬೆಳೆಗಾರರು ಆಗ್ರಹಿಸಿದ್ದಾರೆ.
ಸಚಿವ ಶಿವಾನಂದ ಪಾಟೀಲ್
ಸಚಿವ ಶಿವಾನಂದ ಪಾಟೀಲ್

ಬೆಳಗಾವಿ: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರನ್ನು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಿಂದ ವಜಾಗೊಳಿಸಬೇಕು ಎಂದು ಕಬ್ಬು ಬೆಳೆಗಾರರು ಆಗ್ರಹಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಅವರು, ಸಚಿವರ ಹೇಳಿಕೆಯಿಂದ ರೈತರ ಭಾವನೆಗೆ ಧಕ್ಕೆಯುಂಟಾಗಿದ್ದು, ಕೂಡಲೇ ಶಿವಾನಂದ ಪಾಟೀಲ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿರಬೇಕು ಹಾಗೂ ಮುಖ್ಯಮಂತರ್ಗಿಳು ತಮ್ಮ ಸಂಪುಟದಿಂದ ಪಾಟೀಲ್ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಮುಖ್ಯಮಂತ್ರಿಗಳು ತಮ್ಮ ಸಂಪುಟದಿಂದ ಶಿವಾನಂದ ಪಾಟೀಲ್ ಅವರನ್ನು ವಜಾಗೊಳಿಸದೇ ಹೋದಲ್ಲಿ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿದ್ದ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಒಂದು ಆಸೆ ಇದೆ, ಮೇಲೆ ಮೇಲೆ ಬರಗಾಲ ಬರಲಿ ಎಂಬುದು. ಕಾರಣ ಸಾಲ ಮನ್ನಾ ಆಗುತ್ತೆ ಎಂದು. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com