ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದು ನಮ್ಮ ಸರ್ಕಾರದ ನಿಲುವು. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, ನಮ್ಮ ಭರವಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸುತ್ತೇವೆ. ಹಿಜಾಬ್ ನಿಷೇಧ ಹಿಂಪಡೆಯುತ್ತೇವೆಂದು ಹೇಳುತ್ತೇವೆಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಆಕಾಂಕ್ಷಿಗಳ ಅರ್ಜಿಗಳನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು. ಈ ಸಂಬಂಧ ಮಂಗಳವಾರ ವಿಜಯಪುರದಲ್ಲಿ ಸಭೆ ನಡೆಯಲಿದೆ ಎಂದರು.
Advertisement