ಜಾತಿ ಗಣತಿ ವರದಿ ಸ್ವೀಕಾರಕ್ಕೆ ಒತ್ತಾಯಿಸಿ ಅಲ್ಪಸಂಖ್ಯಾತರು, ಹಿಂದುಳಿದ, ದಲಿತರಿಂದ ಚಿತ್ರದುರ್ಗದಲ್ಲಿ ಬೃಹತ್ ರ‍್ಯಾಲಿ

ವೀರಶೈವ ಲಿಂಗಾಯತ ಸಮಾವೇಶದ ನಂತರ, ಜಾತಿ ಗಣತಿ ವರದಿಯನ್ನು ಅಂಗೀಕರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಪ್ರಭಾವಿ ಜಾತಿಗಳನ್ನು ಎದುರಿಸಲು ಶೋಷಿತ ವರ್ಗಗಳು ಮತ್ತು ಅಲ್ಪಸಂಖ್ಯಾತರು ಚಿತ್ರದುರ್ಗ ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ವೀರಶೈವ ಲಿಂಗಾಯತ ಸಮಾವೇಶದ ನಂತರ, ಜಾತಿ ಗಣತಿ ವರದಿಯನ್ನು ಅಂಗೀಕರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಪ್ರಭಾವಿ ಜಾತಿಗಳನ್ನು ಎದುರಿಸಲು ಶೋಷಿತ ವರ್ಗಗಳು ಮತ್ತು ಅಲ್ಪಸಂಖ್ಯಾತರು ಚಿತ್ರದುರ್ಗ ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿ ಅಹಿಂದ ಗುಂಪು, ಹಿಂದುಳಿದ ಮತ್ತು ದಲಿತ ಸಮುದಾಯಗಳು ಜನವರಿ 28 ರಂದು ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಿವೆ ಎಂದು ಮೂಲಗಳು ಖಚಿತಪಡಿಸಿವೆ.

ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದ್ದು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮತ್ತು ಇತರ ಎಲ್ಲ ಪ್ರಮುಖ ನಾಯಕರು ಸಮಾವೇಸದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶವು ಜಾತಿ ಗಣತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಲು ಮತ್ತು ಕೇಂದ್ರ ಸರ್ಕಾರದಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಮಾನದಂಡಗಳ ಮೇಲೆ ಜಾತಿ ಸಮೀಕ್ಷೆಯನ್ನು ನಡೆಸುವಂತೆ ಒತ್ತಾಯಿಸಲಿದೆ.

ಸಮಾವೇಶವು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ನೀಡಿರುವ ಶೇ 10 ರಷ್ಟು ಮೀಸಲಾತಿ ರದ್ದುಗೊಳಿಸುವಂತೆ, ಮಹಿಳಾ ಮೀಸಲಾತಿ ಮಸೂದೆಯ ತಕ್ಷಣದ ಅನುಷ್ಠಾನ; ರಾಜಕೀಯದಲ್ಲಿ ಒಳ ಮೀಸಲಾತಿ; ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವುದು ಮತ್ತು ಖಾಸಗಿ ಕ್ಷೇತ್ರಕ್ಕೆ ಮೀಸಲಾತಿ ವಿಸ್ತರಿಸಲು ಒತ್ತಾಯಿಸಲಿದೆ.

ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಲಿಂಗಾಯತ ಸಮುದಾಯದವರು ಜಾತಿ ಗಣತಿ ವರದಿಯನ್ನು ಅಂಗೀಕರಿಸಬಾರದು ಎಂದು ಮನವಿ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಜಾತಿ ಗಣತಿ ವರದಿಯನ್ನು ಸ್ವೀಕರಿಸದಂತೆ ಕಾಂಗ್ರೆಸ್ ಸರ್ಕಾರಕ್ಕೆ ಒಕ್ಕಲಿಗ ಸಮುದಾಯದವರು ಎಚ್ಚರಿಕೆ ನೀಡಿದ್ದಾರೆ.

ಜಾತಿ ಗಣತಿ ನಡೆಸಲು ಕರ್ನಾಟಕ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಪ್ರಾಮಾಣಿಕ ಬದ್ಧತೆ ಇದ್ದರೆ ಜಾತಿ ಗಣತಿ ವರದಿಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಹೇಳಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ತಾವು ಜಾತಿ ಗಣತಿ ವಿಚಾರದಲ್ಲಿ ಪಕ್ಷದ ನಿಲುವಿಗೆ ಬದ್ಧವಾಗಿದ್ದು, ವೈಜ್ಞಾನಿಕ ವಿಧಾನದಲ್ಲಿ ವಿವಿಧ ಸಮುದಾಯಗಳ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಹೇಳಿದರು. 

ವಿವಾದಿತ ಜಾತಿ ವರದಿಯನ್ನು ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

2015 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಚ್.ಕಾಂತರಾಜು ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಜಾತಿ ಗಣತಿ ನಡೆಸಿತು. ಜಾತಿ ಗಣತಿಗೆ ಸಿದ್ದರಾಮಯ್ಯ ಆದೇಶ ನೀಡಿದರೂ, ವರದಿಯನ್ನು ಒಪ್ಪಿಕೊಳ್ಳದಂತೆ ಹಠ ಹಿಡಿದ ತಮ್ಮ ಪಕ್ಷದ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಮುಖಂಡರ ಮುಂದೆ ಬಗ್ಗಬೇಕಾಯಿತು.

ರಾಜ್ಯದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳು ಬಹುಸಂಖ್ಯಾತರನ್ನು ಹೊಂದಿದ್ದು, ನಂತರ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿ ಹೇಳಿರುವುದಾಗಿ ತಿಳಿದುಬಂದಿದ್ದು, ಸದ್ಯ ರಾಜ್ಯದಲ್ಲಿ ಬಹುಸಂಖ್ಯಾತ ಜನಸಂಖ್ಯೆ ಎಂದು ಪರಿಗಣಿಸಲಾದ ಲಿಂಗಾಯತರನ್ನು ಮೂರನೇ ಅತಿದೊಡ್ಡ ಗುಂಪು ಎಂದು ತೋರಿಸಲಾಗಿದೆ. ಎರಡನೇ ಸ್ಥಾನದಲ್ಲಿದ್ದಾರೆ ಎಂದು ನಂಬಲಾದ ಒಕ್ಕಲಿಗ ಸಮುದಾಯವು ನಾಲ್ಕನೇ ಸ್ಥಾನದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಮುಸ್ಲಿಂ ಸಮುದಾಯವು ಕರ್ನಾಟಕದಲ್ಲಿ ಎರಡನೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ ಎಂದು ವರದಿಯಲ್ಲಿದೆ ಎನ್ನುವುದು ರಾಜ್ಯದಲ್ಲಿ ಭಾರಿ ವಿವಾದವನ್ನು ಹುಟ್ಟುಹಾಕಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com