ನೌಕರಿಗೆ ಶಿಫಾರಸ್ಸು ಮಾಡಲು ಲಂಚಕ್ಕೆ ಬೇಡಿಕೆ: 10 ಸಾವಿರ ರೂ. ಸ್ವೀಕರಿಸುತ್ತಿದ್ದ ವೇಳೆ ಬಿಇಒ ಲೋಕಾಯುಕ್ತ ಬಲೆಗೆ

ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕೆ ಶಿಫಾರಸು ಮಾಡಲು 10 ಸಾವಿರ ಲಂಚ ಪಡೆದ ಆರೋಪದ ಮೇಲೆ ಮೂಡಿಗೆರೆ ಬಿಇಒ ಹೇಮಂತರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ (ಸಂಗ್ರಹ ಚಿತ್ರ)
ಲೋಕಾಯುಕ್ತ (ಸಂಗ್ರಹ ಚಿತ್ರ)

ಚಿಕ್ಕಮಗಳೂರು: ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕೆ ಶಿಫಾರಸು ಮಾಡಲು 10 ಸಾವಿರ ಲಂಚ ಪಡೆದ ಆರೋಪದ ಮೇಲೆ ಮೂಡಿಗೆರೆ ಬಿಇಒ ಹೇಮಂತರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಅನುಕಂಪದ ಆಧಾರದ ಮೇಲೆ ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್ ರಾಜ್ 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದ್ದು, ಹಣ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಬಿಇಒ ಹೇಮಂತ್ ರಾಜ್ ಅವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮೂಡಿಗೆರೆಯ ತೇಗೂರು ಗ್ರಾಮದ ಹೊಯ್ಸಳಲು ಎಂಬಲ್ಲಿ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ರಜನಿಕಾಂತ್ ಏಳು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪತ್ನಿ ಲತಾಮಣಿ ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅನುಕಂಪದ ಆಧಾರದ ಮೇಲೆ ನೇಮಕ ಮಾಡಲು ಉನ್ನತ ಅಧಿಕಾರಿಗಳಿಗೆ ಶಿಫಾರಸು ಮಾಡುವಂತೆ ಲತಾಮಣಿ ಬಿಇಒಗೆ ಮನವಿ ಮಾಡಿದರು.

ದ್ವಿತೀಯ ದರ್ಜೆ ಸಹಾಯಕರೊಬ್ಬರ ಮೂಲಕ ಬಿಇಒ 15 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಬಿಇಒ ಜತೆ ದೂರವಾಣಿ ಮೂಲಕ ಮಾತನಾಡಿ ಮೊತ್ತ ಕಡಿಮೆ ಮಾಡಲು ಒಪ್ಪಿಗೆ ನೀಡಿದ್ದರು. ದೂರಿನ ಜತೆಗೆ ಆಡಿಯೋ ದಾಖಲೆಯನ್ನೂ ಲೋಕಾಯುಕ್ತಕ್ಕೆ ಸಲ್ಲಿಸಲಾಗಿದೆ. ಕೊನೆಗೆ 10 ಸಾವಿರ ರೂ.ಗೆ ಒಪ್ಪಿಕೊಂಡಿದ್ದ ಹಣ ನೀಡುವಾಗ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಇನ್ಸ್ ಪೇಕ್ಟರ್ ಅನಿಲ್ ರಾಥೋಡ್ ತಂಡ ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com