ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು, 103 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. 1.41 ರಷ್ಟು ಇದೆ. ಬೆಂಗಳೂರಿನಲ್ಲಿ 2,321 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ 80 ಮಂದಿಗೆ ಸೋಂಕು ದೃಢಪಟ್ಟಿದೆ. 

ಶಿವಮೊಗ್ಗ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಪ್ರಕರಣ, ವಿಜಯಪುರದಲ್ಲಿ 1. ತುಮಕೂರಿನಲ್ಲಿ 1, ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಸೋಂಕಿತರಲ್ಲಿ 422 ಮಂದಿ ಮನೆ ಆರೈಕೆಗೆ ಒಳಗಾದರೆ, 57 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 19 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 38 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. ಸೋಂಕಿತರಲ್ಲಿ 87 ಮಂದಿ ಇಂದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com