ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.
ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.

ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.
Published on

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಆರಂಭಿಸಿದ್ದರು. ಅಲ್ಲದೆ, ಕಾರ್ಯಕರ್ತರು ನಗರದ ವಿವಿಧೆಡೆ ವಿಶೇಷವಾಗಿ ವ್ಯಾಪಾರ ಕೇಂದ್ರಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಚಾಮರಾಜಪೇಟೆ, ಚಿಕ್ಕಪೇಟೆ, ಕೆಂಪೇಗೌಡ ರಸ್ತೆ, ಗಾಂಧಿ ನಗರ, ಸೇಂಟ್ ಮಾರ್ಕ್ಸ್ ರಸ್ತೆ, ಕನ್ನಿಂಗ್‌ಹ್ಯಾಮ್ ರಸ್ತೆ, ರೆಸಿಡೆನ್ಸಿ ರಸ್ತೆ, ಕೆಆರ್ ಪುರಂ, ಹೆಬ್ಬಾಳದಲ್ಲಿ ರ್ಯಾಲಿ ನಡೆಸಿದರು.

ಇದರಂತೆ ಲಾವೆಲ್ಲೆ ರಸ್ತೆ ಮತ್ತು ಯುಬಿ ಸಿಟಿ ಸುತ್ತಮುತ್ತಲು ಕರವೇ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ಇಂಗ್ಲೀಷ್ ನಲ್ಲಿದ್ದ ಕೆಲವು ಬೋರ್ಡ್‌ಗಳಿಗೆ ಕಪ್ಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಉಪಸ್ಥಿತರಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಅವರು ಮಾತನಾಡಿ, ಮಾಲ್ ಆಫ್ ಏಷ್ಯಾ ಮಾಲೀಕರು ಮತ್ತು ಇತರ ಮಾಲ್ ಮಾಲೀಕರು ಶೇ. 60 ಕನ್ನಡ ನಾಮಫಲಕ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಇವರು ಪೊಲೀಸರ ರಕ್ಷಣೆ ತೆಗೆದುಕೊಂಡಿರಬಹುದು. ಆದರೆ, ನಿಯಮಗಳನ್ನು ಪಾಲಿಸದಿದ್ದರೆ, ಕನ್ನಡಕ್ಕೆ ಆದ್ಯತೆ ನೀಡದಿದ್ದರೆ, ಕ.ರಾ.ವೇ ಕಾರ್ಯಕರ್ತರು ಆಸ್ತಿಪಾಸ್ತಿಗಳನ್ನು ನಾಶಪಡಿಸುತ್ತಾರೆಂದು ಎಚ್ಚರಿಸಿದರು.

ಇದೇ ವೇಳೆ ದೇವನಹಳ್ಳಿ ಟೋಲ್ ಗೇಟ್ ಬಳಿ ಪೊಲೀಸರು ನಾರಾಯಣ ಗೌಡ ಮತ್ತು ರಾಜ್ಯ ಕಾರ್ಯದರ್ಶಿ ಸಣ್ಣ ಈರಪ್ಪ ಅವರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡರು.

ನಿನ್ನೆಯಷ್ಟೇ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಭೆ ನಡೆಸಿ, 15 ದಿನಗಳಲ್ಲಿ ಕನ್ನಡ ನಾಮಫಲಕಗಳ ಹಾಕುವಂತೆ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com