ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ: 69 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿದ್ದಾರೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿದ್ದಾರೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 8,350 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 6,346 ಆರ್ ಟಿ ಪಿಸಿಆರ್ ಹಾಗೂ 2,004 RAT ಪರೀಕ್ಷೆ ಮಾಡಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ. 1.89 ರಷ್ಟಿದ್ದು, ಮರಣ ದರ ಶೇ 0.00 ಆಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

568 ಸಕ್ರಿಯ ಪ್ರಕರಣಗಳಲ್ಲಿ 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 14 ಸೋಂಕಿತರು ಐಸಿಯು ಹಾಗೂ 40 ಸೋಂಕಿತರು ಜನರಲ್ ಬೆಡ್ ನಲ್ಲಿದ್ದಾರೆ.

ಬೆಂಗಳೂರು ನಗರದಲ್ಲಿ 85 ಪ್ರಕರಣ ದಾಖಲಾಗಿದ್ದು, 414 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಬೀದರ್ 1, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ದಕ್ಷಿಣ ಕನ್ನಡದಲ್ಲಿ 8, ಧಾರವಾಡ 2, ಗದಗ 2, ಹಾಸನ 2 , ಕಲಬರುಗಿ 1 ಹಾಗೂ ಕೋಲಾರದಲ್ಲಿ 3 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com