ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು 

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.
ಅಧಿಕಾರಿಗಳ ಸಭೆಯಲ್ಲಿ ಜಮೀರ್ ಅಹ್ಮದ್ ಖಾನ್
ಅಧಿಕಾರಿಗಳ ಸಭೆಯಲ್ಲಿ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾ ಲಯದಲ್ಲಿ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲಾವಾರು ವಕ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ. ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು, ವಕ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಬೇಕು,  ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು ಎಂದು ಅವರು ಸೂಚಿಸಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com