ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ ದಂಡ, ಶಿಕ್ಷೆ!

ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 
ಸಚಿವ ಮಧು ಬಂಗಾರಪ್ಪ
ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 

6 ಕೋಟಿ 96 ಲಕ್ಷ 60 ಸಾವಿರ ರೂಪಾಯಿ ಮೊತ್ತದ ಚೆಕ್ ಬೌನ್ಸ್ ಆಗಿದ್ದು, ಸರ್ಕಾರಕ್ಕೆ 10 ಸಾವಿರ ರೂಪಾಯಿ ದಂಡ ಪಾವತಿಸಬೇಕೆಂದು ಕೋರ್ಟ್ ಆದೇಶ ಹೊರಡಿಸಿದೆ. 

ದೂರುದಾರರಿಗೆ ನೀಡಬೇಕಿರುವ ಹಣದ ಜೊತೆಗೆ ದಂಡ ಪಾವತಿಸದೇ ಇದ್ದಲ್ಲಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ಕೋರ್ಟ್ ಹೇಳಿದೆ. ಮಧು ಬಂಗಾರಪ್ಪ ದೂರುದಾರರಿಗೆ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಕೋಟಿ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.

ಆದರೆ ವಿಶೇಷ ಕೋರ್ಟ್, ಮುಚ್ಚಳಿಕೆ ಒಪ್ಪಲು ನಿರಾಕರಿಸಿದ್ದು, ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ ಆದ್ದರಿಂದ ಮನವಿಯನ್ನು ತಿರಸ್ಕರಿಸುತ್ತಿರುವುದಾಗಿ ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com