ವಿದ್ಯಾರ್ಥಿ ಜೊತೆ ರೊಮ್ಯಾಂಟಿಕ್ ಫೋಟೋ ಶೂಟ್ ವೈರಲ್; ಮುಖ್ಯ ಶಿಕ್ಷಕಿ ಅಮಾನತು

ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ.
ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿಯ ರೊಮ್ಯಾಂಟಿಕ್ ಫೋಟೊ ಶೂಟ್
ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿಯ ರೊಮ್ಯಾಂಟಿಕ್ ಫೋಟೊ ಶೂಟ್

ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ್ದರು. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು, ಮುಖ್ಯೋಪಾಧ್ಯಾಯಿನಿ ಕೂಡ ವಿದ್ಯಾರ್ಥಿಯನ್ನು ತಬ್ಬಿಕೊಂಡು ಪ್ರಣಯವಾಗಿ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಈ ಎಲ್ಲ ಫೋಟೊಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೂಟ್‌ನ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಚಿಂತಾಮಣಿ ಜಿಲ್ಲಾ ಶಿಕ್ಷಣಾಧಿಕಾರಿ ಉಮಾದೇವಿ ಶಾಲೆಗೆ ಭೇಟಿ ನೀಡಿ ಪ್ರವಾಸಕ್ಕೆ ತೆರಳಿದ್ದ ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 22 ರಿಂದ 25 ರವರೆಗೆ ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಹೊರನಾಡು, ಧರ್ಮಸ್ಥಳ, ಯಾಣ ಮತ್ತು ಇತರ ಸ್ಥಳಗಳಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದು, ಅಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ ಎಂದು ಉಮಾದೇವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವೈರಲ್ ಆಗಿರುವ ಫೋಟೋಗಳನ್ನು ಇನ್ನೊಬ್ಬ ವಿದ್ಯಾರ್ಥಿ ತೆಗೆದಿದ್ದು, ಇಬ್ಬರು ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯಿನಿ ಹೊರತುಪಡಿಸಿ, ಇತರ ಯಾವುದೇ ಸಿಬ್ಬಂದಿ ಅಥವಾ ವಿದ್ಯಾರ್ಥಿಗೆ ಘಟನೆಯ ಬಗ್ಗೆ ತಿಳಿದಿರಲಿಲ್ಲ" ಎಂದು ಅವರು ಹೇಳಿದರು.

ಅಲ್ಲದೆ ಬಿಇಒ ಅವರ ಶಿಫಾರಸಿನಂತೆ ಮುಖ್ಯ ಶಿಕ್ಷಕಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಪಿ.ಬೈಲಾಂಜನಪ್ಪ ಅವರು ಇಲಾಖಾ ವಿಚಾರಣೆ ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com