ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಮುಸ್ಲಿಂ ಮಹಿಳೆಯರ ಕುರಿತು ಅವಬಹೇಳನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕೂಡಲೇ ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಲ್ಲಡ್ಕ ಪ್ರಭಾಕರ್‌ ಭಟ್‌
ಕಲ್ಲಡ್ಕ ಪ್ರಭಾಕರ್‌ ಭಟ್‌
Updated on

ಬೆಂಗಳೂರು: ಮುಸ್ಲಿಂ ಮಹಿಳೆಯರ ಕುರಿತು ಅವಬಹೇಳನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕೂಡಲೇ ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಫ್ರೀಡಂಪಾರ್ಕ್ ನಲ್ಲು ಶುಕ್ರವಾರ 300ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದರು. ನಮ್ಮ ಉದ್ದೇಶ ಸ್ಪಷ್ಟವಾಗಿದೆ.  ಆರ್‌ಎಸ್‌ಎಸ್ ಮುಖಂಡ ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದೇವೆ. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರು ಹೇಳಿಕೆ ನೀಡಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಹೇಳಿಕೆ ಅವಹೇಳನಕಾರಿಯಾಗಿದೆ. ಅವರ ಬಂಧನ ಮಾಡದೆ ಸರ್ಕಾರ ಲೋಪವೆಸಗಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ವಕೀಲರಾದ ರಕ್ಷಿತಾ ಸಿಂಗ್ ಅವರು ಮಾತನಾಡಿ, ನಿರ್ದಿಷ್ಟ ಸಮುದಾಯಗಳ ವಿರುದ್ಧ ದ್ವೇಷಪೂರಿತ ಹೇಳಿಕೆಯನ್ನು ನೀಡಲಾಗಿದೆ. ಇಂತಹ ಹೇಳಿಕೆಗಳು ಭವಿಷ್ಯದಲ್ಲೂ ಇತರರು ನೀಡಬಹುದು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಇದನ್ನು ತಡೆಯಲು ಶಿಕ್ಷೆಗಳನ್ನು ರೂಪಿಸಬೇಕಿದೆ ಎಂದು ಹೇಳಿದ್ದಾರೆ.

ದ್ವೇಷಪೂರಿತ ವಾತಾವರಣವನ್ನು ಬೆಳೆಸುವ ಹಂತಕ್ಕೆ ವಾಕ್ ಸ್ವಾತಂತ್ರ್ಯದ ದುರುಪಯೋಗವಾಗುತ್ತಿದೆ. ಇದು ನಮ್ಮ ದೇಶದೊಳಗಿನ ಸಮುದಾಯದ ಸುರಕ್ಷತೆಗದೆ ಅಪಾಯವನ್ನುಂಟು ಮಾಡಲಿದೆ ಎಂದು ತಿಳಿಸಿದ್ದಾರೆ.

ವುಮೆನ್ ಇಂಡಿಯಾ ವುಮೆನ್ ರಾಜ್ಯ ಕಾರ್ಯದರ್ಶಿ ಸಯೀದಾ ಬೇಗಂ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಸರ್ಕಾರ ಕಲ್ಲಡ್ಕ ಪ್ರಭಾಕರ್ ವಿರುದ್ಧ ಕೈಗೊಳ್ಳದಿದ್ದರೆ, ಇಂತಹರ ತಡೆಯಲು ಕಾನೂನು ಜಾರಿ ಮಾಡದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಅವರ ಹೇಳಿಕೆಯು ನಮ್ಮ ಇಡೀ ಸಮುದಾಯವನ್ನು ಭಾವನಾತ್ಮಕವಾಗಿ ಘಾಸಿಗೊಳಿಸಿದೆ. ನಮ್ಮ ಹಕ್ಕುಗಳ ರಕ್ಷಣೆಗಾಗಿ ನಾವು ಈ ಸರ್ಕಾರವನ್ನು ಆಯ್ಕೆ ಮಾಡಿದ್ದೇವೆ. ಆದರೆ, ಸರ್ಕಾರ ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲಾಗಿರುವುದು ಬೇಸರ ಸಂಗತಿ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com