ಕೊಡಗು: ನದಿಯಲ್ಲಿ ಈಜಲು ಹೋಗಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು!

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ವಿದ್ಯಾರ್ಥಿಗಳು ನೀರುಪಾಲು
ವಿದ್ಯಾರ್ಥಿಗಳು ನೀರುಪಾಲು

ಕೊಡಗು: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು 20 ವರ್ಷದ ರಷಿಕ್ ಕುಶಾಲಪ್ಪ, 20 ವರ್ಷದ ಆಕಾಶ್ ಬಿದ್ದಪ್ಪ ಮತ್ತು 20 ವರ್ಷದ ಸುದೀಶ್ ಅಯ್ಯಪ್ಪ ಎಂದು ಗುರುತಿಸಲಾಗಿದೆ.

ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್‌ ಕಾರಣಕ್ಕೆ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದು ಈ ವೇಳೆ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಮೂವರು ಕೊಚ್ಚಿ ಹೋಗಿದ್ದು ಇಬ್ಬರು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. 

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com