ಅಕ್ರಮವಾಗಿ ಮರ ಕಡಿತ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರು!

ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ.
ವಿಕ್ರಮ್ ಸಿಂಹಗೆ ಜಾಮೀನು ಮಂಜೂರು
ವಿಕ್ರಮ್ ಸಿಂಹಗೆ ಜಾಮೀನು ಮಂಜೂರು
Updated on

ಹಾಸನ: ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ.

ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿ ಬೇಲೂರಿನ ಸೀನಿಯರ್​ ಸಿವಿಲ್ ಜಡ್ಜ್​​ ಆದೇಶ ಹೊರಡಿಸಿದೆ. ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಹಾಸನ ‌ಜಡ್ಜ್​​​ ಮನೆಯಿಂದ ವಕೀಲರ ಜೊತೆ ವಿಕ್ರಂ ಸಿಂಹ ಹೊರಬಂದಿದ್ದಾರೆ.

ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ಪ್ರಕರಣ ಸಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ FIR ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂ ಸಿಂಹರನ್ನು ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ಜಡ್ಜ್​​ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು.

ರಾಜಕೀಯ ಪಿತೂರಿ ಎಂದ ವಿಕ್ರಂ ಸಿಂಹ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಸಿಂಹ, 'ನನ್ನ ವಿರುದ್ಧ ಎಷ್ಟು ಪಿತೂರಿ ಮಾಡ್ತಿದ್ದಾರೆ ಎಂಬುದನ್ನ ಟೈಮ್ ಬರಲಿ ಎಲ್ಲದನ್ನೂ ಹೇಳಲುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ವ್ಯವಸ್ಥಿತವಾಗಿ ನನ್ನನ್ನ ಮುಗಿಸುವುದಕ್ಕಾಗಿ ಪ್ರಯತ್ನ ಮಾಡ್ತಿದ್ದಾರೆ. ನಮ್ಮ ಬ್ರದರ್​​ನ ಟಾರ್ಗೆಟ್​ ಮಾಡ್ತಿದ್ದಾರೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com