ಕೋವಿಡ್ -19: ಕರ್ನಾಟಕದಲ್ಲಿ ಮತ್ತೆ ಸೋಂಕು ಏರಿಕೆ, ಇಂದು 229 ಹೊಸ ಪ್ರಕರಣಗಳು ದಾಖಲು!

ಕರ್ನಾಟಕದಲ್ಲಿ ಭಾನುವಾರ 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ದಾಟಿದೆ.
ಕೋವಿಡ್-19 ಸೋಂಕು (ಸಂಗ್ರಹ ಚಿತ್ರ)
ಕೋವಿಡ್-19 ಸೋಂಕು (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಗಡಿ ದಾಟಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಭಾನುವಾರ 229 ಹೊಸ ಕೋವಿಡ್ -19 ಸೋಂಕು ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1000ಕ್ಕೆ ಏರಿದೆ. ಈ ಪೈಕಿ 943 ಜನರು ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಉಳಿದ 57 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಂತೆಯೇ ಇಂದು ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. 

ಕಳೆದ 24 ಗಂಟೆಗಳಲ್ಲಿ 62 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು 3,527 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ 2,972 RTPCR ಮತ್ತು 555 ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜಧಾನಿಯಲ್ಲಿ 83 ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಅತಿ ಹೆಚ್ಚಿನದ್ದಾಗಿದೆ. ರಾಜ್ಯದಲ್ಲಿ ಸೋಂಕು ಸಕಾರಾತ್ಮಕತೆಯ ಪ್ರಮಾಣವು ಶೇ.6.49 ಪ್ರತಿಶತದಷ್ಟಿದ್ದರೆ, ಪ್ರಕರಣದ ಸಾವಿನ ಪ್ರಮಾಣವು ಶೇ.0.00 ಪ್ರತಿಶತದಷ್ಟಿದೆ ಎಂದು ಆರೋಗ್ಯ ಇಲಾಖೆಯ ದತ್ತಾಂಶಗಳು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com