ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ: ಸಂತಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿಂದು ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕದಲ್ಲಿನ ಮಹತ್ವಕಾಂಕ್ಷೆಯ ಭ್ರದ್ರಾ ಮೇಲ್ದಂಡೆ ಯೋಜನೆಗೆ ರೂ. 5.630 ಕೋಟಿ ಅನುದಾನವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com