ಶರಾವತಿ ಸಂತ್ರಸ್ತರಿಗೆ ಜಮೀನು ಹಕ್ಕುಪತ್ರ ನೀಡಲು ಕೇಂದ್ರಕ್ಕೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಯಡಿಯೂರಪ್ಪ

ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವುದು.
ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವುದು.

ಬೆಂಗಳೂರು: ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕುಪತ್ರ ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಗುರುವಾರ ಹೇಳಿದ್ದಾರೆ.

ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತು ಗೃಹ ಸಚಿವ ಆರಗ ನೇತೃತ್ವದಲ್ಲಿ ನಿನ್ನೆ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, ಶರಾವತಿ ಸಂತ್ರಸ್ತರಿಗೆ ತಾವು ಉಳುಮೆ ಮಾಡುವ ಜಮೀನು ಹಕ್ಕು ನೀಡುವುದು 60 ವರ್ಷದ ಸಮಸ್ಯೆ ಆಗಿತ್ತು. ಮೊನ್ನೆ ಕೇಂದ್ರ ಅರಣ್ಯ ಸಚಿವರ ಭೇಟಿ ಮಾಡಿದ್ವಿ. ಅವರು ಎಲ್ಲಾ ಸರ್ವೆ ಮಾಡಿ ಪ್ರಪೋಸಲ್ ಕಳಿಸಿ ಎಂದಿದ್ದಾರೆ. ಹೀಗಾಗಿ ಪ್ರಸ್ತಾವನೆ ಸಿದ್ಧ ಪಡಿಸಲಾಗಿದೆ ಎಂದು ಹೇಳಿದರು.

ಶರಾವತಿ ಯೋಜನೆಗೆ ಭೂಮಿ ಕೊಟ್ಟವರಿಗೆ ಈಗ ಭೂಮಿ ಇಲ್ಲದಂತೆ ಆಗಿದೆ. ಈಗಾಗಲೇ ಜಿಲ್ಲಾಡಳಿತ ಸರ್ವೆ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವುದಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸುತ್ತೇವೆ. ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡೋ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಈ ಸಮಸ್ಯೆಯನ್ನು ಚರ್ಚಿಸಲು ನಾವು ಇತ್ತೀಚೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವನ್ನು ಭೇಟಿ ಮಾಡಿದ್ದೇವೆ. ಸಮೀಕ್ಷೆ ನಡೆಸಿ ಪ್ರಸ್ತಾವನೆ ಕಳುಹಿಸುವಂತೆ ಸಚಿವರು ತಿಳಿಸಿದರು. ಶಿವಮೊಗ್ಗ ಜಿಲ್ಲಾಡಳಿತ ಸಮೀಕ್ಷೆ ಪೂರ್ಣಗೊಳಿಸಿದೆ. ಹಕ್ಕುಪತ್ರ ನೀಡಲು ಪ್ರಸ್ತಾವನೆಯನ್ನು ತಕ್ಷಣವೇ ಕಳುಹಿಸಲಾಗುವುದು. ಇದರಿಂದ 12,000ಕ್ಕೂ ಹೆಚ್ಚು ಸಂತ್ರಸ್ತರಿಗೆ ಅನುಕೂಲವಾಗಲಿದೆ ಎಂದರು.

ಸಭೆ ಮುಗಿದ ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅರಣ್ಯ ಮತ್ತು ಕಂದಾಯ ಅಧಿಕಾರಿಗಳಿಗೆ ಒತ್ತುವರಿದಾರರಿಗೆ ಹಕ್ಕುಪತ್ರ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡರು.  ಈ ವೇಳೆ ಶಾಸಕರಾದ ಹರತಾಳು ಹಾಲಪ್ಪ, ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com