
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಶುಕ್ರವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಇವರು ಜಾಹೀರಾತು ಮಾಫಿಯಾ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಇವರು ಶಾಸಕ ಗರುಡಾಚಾರ್ ಅವರ ಆಪ್ತ ಸಹಾಯಕರಾಗಿದ್ದರು.
ಇಂದು ದೇವೆಗೌಡ ಪೆಟ್ರೋಲ್ ಬಂಕ್ ಬಳಿಯಿರುವ ಇವರ ಮನೆಯಲ್ಲಿ ಮಧ್ಯಾಹ್ನ 2-30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬನಶಂಕರಿ ಅಥವಾ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
Advertisement