ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ಹುಲಿ ದಾಳಿ; ನಿವಾಸಿಗಳಲ್ಲಿ ಆತಂಕ

ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. 

ಪೊನ್ನಂಪೇಟೆ ತಾಲೂಕಿನ ಸಮೀಪದ ಗ್ರಾಮಗಳಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಹಸುಗಳು ಬಲಿಯಾಗಿದ್ದು, ಹುಲಿಯನ್ನು ಹಿಡಿಯುವಂತೆ ಗ್ರಾಮಸ್ಥರು ಈ ಹಿಂದೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.

ಶುಕ್ರವಾರ ಬೆಳಗ್ಗೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಪಂಚಾಯಿತಿ ವ್ಯಾಪ್ತಿಯ ರುದ್ರಗುಪ್ಪೆಯಲ್ಲಿ ಹಸುವೊಂದರ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಬಲಿಯಾಗಿದೆ. ಈ ಸ್ಥಳದಿಂದ ಕೇವಲ 20 ಕಿ.ಮೀ ದೂರದಲ್ಲಿ, ಹಿಂದಿನ ದಿನ ಹುಲಿಯೊಂದು ಹಳ್ಳಿಯೊಂದರಲ್ಲಿ ಹಸುವನ್ನು ಬಲಿ ತೆಗೆದುಕೊಂಡಿತ್ತು. ಎರಡೂ ಹಸುಗಳನ್ನು ಒಂದೇ ಹುಲಿ ಕೊಂದಿದೆಯೇ ಎಂಬುದು ಇನ್ನೂ ಪತ್ತೆಯಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com