ಇಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ; ವರಿಷ್ಠರ ಭೇಟಿ, ಬಜೆಟ್, ವಿಧಾನಸಭೆ ಚುನಾವಣೆ ಕುರಿತು ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭಾನುವಾರ ದೆಹಲಿ ಪ್ರವಾಸ ಕೈಗೊಂಡಿದ್ದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭಾನುವಾರ ದೆಹಲಿ ಪ್ರವಾಸ ಕೈಗೊಂಡಿದ್ದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಇಂದು ಮಧ್ಯಾಹ್ನ 2.30ಕ್ಕೆ ಸಿಎಂ ಬೊಮ್ಮಾಯಿಯವರು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ ಮೊನ್ನೆಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿರುವ ಅನುದಾನ ಮತ್ತು ಕರ್ನಾಟಕಕ್ಕೆ ಬೇರೆ ಯೋಜನೆಗಳಿಗೆ ಕೇಂದ್ರದ ನೆರವಿಗೆ ಮುಖ್ಯಮಂತ್ರಿಗಳು ವರಿಷ್ಠರಿಗೆ ಧನ್ಯವಾದ ಹೇಳಲಿದ್ದಾರೆ. ಅದರ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.  

ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿಯವರ ಸಿಡಿ ಕೇಸಿಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ವರಿಷ್ಠರನ್ನು ಭೇಟಿ ಮಾಡಿದ ಬಳಿಕ ರಾತ್ರಿ 11.15ಕ್ಕೆ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಸಿಎಂ ಬಜೆಟ್ ಬಗ್ಗೆ ಚರ್ಚೆ: ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮುಖ್ಯಮಂತ್ರಿಗಳು  ಅಧಿಕಾರಿಗಳೊಂದಿಗೆ 2023-24ನೇ ಸಾಲಿನ ಆಯವ್ಯಯ ಕುರಿತು ಪೂರ್ವಭಾವಿ ಚರ್ಚೆ ನಡೆಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com