ಮೈಸೂರು: ಮೂವರು ಸರಗಳ್ಳರ ಬಂಧನ, 13 ಲಕ್ಷ ರೂ. ಮೌಲ್ಯದ ಚಿನ್ನದ ಸರ ವಶಪಡಿಸಿಕೊಂಡ ಪೊಲೀಸರು

ಮೈಸೂರು ನಗರದಲ್ಲಿ ಸರಣಿ ಸರಗಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು 13 ಲಕ್ಷ ಮೌಲ್ಯದ 220 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದು,  ಏಳು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮೈಸೂರು: ಮೈಸೂರು ನಗರದಲ್ಲಿ ಸರಣಿ ಸರಗಳ್ಳತನ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 23 ರಂದು ಸೂಪರ್ ಮಾರ್ಕೆಟ್‌ನಿಂದ ದಿನಸಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮಾರುತಿ ದೇವಸ್ಥಾನದ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಆಕೆಯ 30 ಗ್ರಾಂ ಚಿನ್ನದ ಸರವನ್ನು ದೋಚಿದ್ದಾರೆ ಎಂದು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಫೆಬ್ರವರಿ 1 ರಂದು ವ್ಯಕ್ತಿಯೊಬ್ಬನನ್ನು  ಬಂಧಿಸಿ ಸರ ವಶಪಡಿಸಿಕೊಂಡಿದ್ದಾರೆ. 

ವಿಚಾರಣೆ ವೇಳೆ ಆರೋಪಿ ಬಹಿರಂಗಪಡಿಸಿದ ವಿವರಗಳ ಆಧಾರದ ಮೇಲೆ ಪೊಲೀಸರು ಫೆಬ್ರವರಿ 2 ರಂದು ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಪೊಲೀಸರು 13 ಲಕ್ಷ ಮೌಲ್ಯದ 220 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದು,  ಏಳು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ.

ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು, ವಿಜಯನಗರ ಠಾಣೆಯಲ್ಲಿನ ಎರಡು ಮತ್ತು ವಿದ್ಯಾರಣ್ಯಪುರಂ ಮತ್ತು ಹೆಬ್ಬಾಳ ಪೊಲೀಸ್ ಠಾಣೆಗಳಲ್ಲಿನ ತಲಾ ಒಂದು ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com