ಸಿಎಂ ಬೊಮ್ಮಾಯಿ
ರಾಜ್ಯ
ಮಾರ್ಚ್ 23 ರಿಂದ 14ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಲೋಗೋ ಬಿಡುಗಡೆ
14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉತ್ಸವದ ಅಧಿಕೃತ ಲಾಂಛನವನ್ನು ಬಿಡುಗಡೆ ಮಾಡಿದರು.
ಬೆಂಗಳೂರು: 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉತ್ಸವದ ಅಧಿಕೃತ ಲಾಂಛನವನ್ನು ಬಿಡುಗಡೆ ಮಾಡಿದರು.
ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ‘ಡಾ ಪುನೀತ್ ರಾಜ್‌ಕುಮಾರ್ ರಸ್ತೆ’ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಬೊಮ್ಮಾಯಿ ಅವರು. ಕನ್ನಡ ನಟರು ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಲೋಗೋವನ್ನು ಅನಾವರಣಗೊಳಿಸಿದರು.
ಕಂದಾಯ ಸಚಿವ ಮತ್ತು ಬಿಐಎಫ್‌ಎಫ್‌ನ ಸಂಘಟನಾ ಸಮಿತಿಯ ಅಧ್ಯಕ್ಷ ಆರ್ ಅಶೋಕ್ ಅವರು, ಕರ್ನಾಟಕ ಚಲನಚಿತ್ರ ಅಕಾಡೆಮಿ (ಕೆಸಿಎ) ಅಧ್ಯಕ್ಷ ಅಶೋಕ್ ಕಶ್ಯಪ್ ಅವರೊಂದಿಗೆ ಬುಧವಾರ ಉತ್ಸವದ ಕುರಿತು ಹೆಚ್ಚಿನ ಚರ್ಚೆಗಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಈ ವರ್ಷ ಉತ್ಸವದಲ್ಲಿ ವಿಭಾಗಗಳು ಮತ್ತು ಸ್ಪರ್ಧೆಗಳಲ್ಲಿ ಸುಮಾರು 300 ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ