ಫೆಬ್ರವರಿ 20 ರಂದು ಶೃಂಗೇರಿ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಭೇಟಿ

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಫೆ.20 ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. 
ಜೆಪಿ ನಡ್ಡಾ, ಶೃಂಗೇರಿ ದೇವಾಲಯ (ಸಂಗ್ರಹ ಚಿತ್ರ)
ಜೆಪಿ ನಡ್ಡಾ, ಶೃಂಗೇರಿ ದೇವಾಲಯ (ಸಂಗ್ರಹ ಚಿತ್ರ)
Updated on

ಬೆಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಹೆಚ್ಚು ಭೇಟಿ ನೀಡುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಫೆ.20 ರಂದು ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. 

ಫೆ.20 ರಂದು ರಾತ್ರಿ ಶೃಂಗೇರಿಯಲ್ಲಿ ತಂಗಲಿರುವ ಜೆಪಿ ನಡ್ಡಾ, ಶಾರದಾಂಬೆಯ ದರ್ಶನದ ಬಳಿಕ ಜಗದ್ಗುರುಗಳನ್ನು ಭೇಟಿ ಮಾಡಲಿದ್ದಾರೆ. 

ಜಗದ್ಗುರುಗಳ ಭೇಟಿಗೆ ಜೆಪಿ ನಡ್ಡಾ 20 ನಿಮಿಷಗಳ ಕಾಲಾವಕಾಶ ಕೋರಿದ್ದಾರೆ. ಶೃಂಗೇರಿ ಮಠದ ಮೇಲೆ ದಾಳಿ ಮಾಡಿದ ಪೇಶ್ವೆ ಸಮುದಾಯಕ್ಕೆ ಸಂಬಂಧಪಟ್ಟವರನ್ನು ಬಿಜೆಪಿ ರಾಜ್ಯದಲ್ಲಿ ಸಿಎಂ ಮಾಡಲು ಹೊರಟಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜೆಪಿ ನಡ್ಡಾ ಶೃಂಗೇರಿಗೆ ಭೇಟಿ ನೀಡಿ ಜಗದ್ಗುರುಗಳೊಂದಿಗೆ ಮಾತನಾಡಲು ಮುಂದಾಗಿರುವುದು ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com