ವೈಎಸ್ ವಿ ದತ್ತಾ
ರಾಜ್ಯ
ಚೆಕ್ ಬೌನ್ಸ್ ಪ್ರಕರಣ: ವೈಎಸ್‌ವಿ ದತ್ತಾ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
ವೈಎಸ್ ವಿ ದತ್ತಾ ಅವರ ವಿರುದ್ಧ ಸಿ.ಎಸ್ ಸೋಮೇಗೌಡ ಎಂಬವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ವಿಚಾರಣೆಗೆ ಗೈರು ಹಾಜರಾಗಿದ್ದ ಮಾಜಿ ಶಾಸಕ ವೈಎಸ್ ವಿ ದತ್ತಾ ಅವರ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದ್ದು, ಮಾರ್ಚ್ 27ಕ್ಕೆ ವೈ ಎಸ್ ವಿ ದತ್ತಾ ಅವರನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ