ಡಾ. ಬಿಆರ್ ಅಂಬೇಡ್ಕರ್‌ಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ: ಸಚಿವ ಜೆಸಿ ಮಾಧುಸ್ವಾಮಿ

ಇತ್ತೀಚೆಗೆ ನಗರದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಡುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದೆ.
ಸಚಿವ ಮಾಧುಸ್ವಾಮಿ.
ಸಚಿವ ಮಾಧುಸ್ವಾಮಿ.

ಬೆಂಗಳೂರು: ಇತ್ತೀಚೆಗೆ ನಗರದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಡುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದೆ.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ, ಜೆಡಿಎಸ್ ಶಾಸಕ ಡಾ. ಕೆ ಅನ್ನದಾನಿ ಅವರು ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವ ನಾಟಕ ಪ್ರದರ್ಶನದ ವಿಷಯವನ್ನು ಪ್ರಸ್ತಾಪಿಸಿದರು.

'ಕೆಲವರನ್ನು ಬಂಧಿಸುವ ಮೂಲಕ ಸರ್ಕಾರ ಕ್ರಮ ಕೈಗೊಂಡಿದೆ. ಅಂಬೇಡ್ಕರ್ ಅವರಿಗೆ ಇಂತಹ ಅವಮಾನವನ್ನು ಒಪ್ಪಲಾಗದು. ‘ಡೀಮ್ಡ್ ಯೂನಿವರ್ಸಿಟಿ’ ಸ್ಥಾನಮಾನವನ್ನು ತೆಗೆದುಹಾಕಿ ಮತ್ತು ಶಿಕ್ಷಣ ಸಂಸ್ಥೆಗೆ ನೀಡಲಾದ ಎಲ್ಲಾ ಸೌಲಭ್ಯಗಳನ್ನು ಹಿಂಪಡೆಯಿರಿ' ಎಂದು ಹೇಳಿದ ಅನ್ನದಾನಿ ಅವರು ಸದನದ ಬಾವಿಗೆ ದೌಡಾಯಿಸಿದರು.

ಇದಕ್ಕೆ ಉತ್ತರಿಸಿದ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, 'ಅಂಬೇಡ್ಕರ್‌ಗೆ ಮಾಡುವ ಅವಮಾನವನ್ನು ಸರ್ಕಾರ ಸಹಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ, ಆಡಳಿತ ಮಂಡಳಿಯ ಪಾತ್ರ ಕಂಡುಬಂದರೆ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು' ಎಂದು ಹೇಳಿದರು.

ಡೀಮ್ಡ್ ಯೂನಿವರ್ಸಿಟಿ ಸ್ಥಾನಮಾನವನ್ನು ತೆಗೆದುಹಾಕಲು ಪದೇ ಪದೆ ಒತ್ತಾಯದ ನಂತರ ಮಾತನಾಡಿದ ಮಾಧುಸ್ವಾಮಿ, 'ಸದನದಲ್ಲಿ ಕೇಳಿದ್ದಕ್ಕೆಲ್ಲ ಸರ್ಕಾರ ಮಣಿಯುವುದಿಲ್ಲ' ಎಂದು ಹೇಳಿದರು.

ರಿಹರ್ಸಲ್ ನಡೆಯುವಾಗ ಈ ನಾಟಕದ ಬಗ್ಗೆ ತಿಳಿದಿದ್ದರಿಂದ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಮತ್ತು ಡೀನ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅನ್ನದಾನಿ ಒತ್ತಾಯಿಸಿದರು.

ಇತ್ತೀಚೆಗೆ ಕಾಲೇಜು ಉತ್ಸವದಲ್ಲಿ ಜೈನ್ (ಡೀಮ್ಡ್-ಟು-ಬಿ) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರದರ್ಶಿಸಿದ ನಾಟಕದಲ್ಲಿ ಡಾ. ಬಿಆರ್ ಅಂಬೇಡ್ಕರ್ ಮತ್ತು ದಲಿತರನ್ನು ಅಪಹಾಸ್ಯ ಮಾಡುವ ಆಕ್ಷೇಪಾರ್ಹ ಉಲ್ಲೇಖಗಳಿವೆ ಎಂದು ಹೇಳಲಾಗಿದ್ದು, ಅದರ ಭಾಗವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. 

ಈ ಸಂಬಂಧ ಏಳು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com