ಏರೋ ಇಂಡಿಯಾ 2023: ಇಂದು, ನಾಳೆ ಬಳ್ಳಾರಿ ರಸ್ತೆಯಿಂದ ದೂರವಿರುವುದೇ ಉತ್ತಮ

ಗುರುವಾರ ಮತ್ತು ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿರುವುದರಿಂದ ಬಳ್ಳಾರಿ ರಸ್ತೆಯನ್ನು ಬಳಸದಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ. 
ಭಾರತೀಯ ವಾಯುಪಡೆಯ (IAF) ಸೂರ್ಯಕಿರಣ್ ಏರೋಬ್ಯಾಟಿಕ್ ತಂಡವು ಏರೋ ಇಂಡಿಯಾ 2023 ರ ಮೂರನೇ ದಿನದಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಪ್ರದರ್ಶನ ನೀಡಿತು.
ಭಾರತೀಯ ವಾಯುಪಡೆಯ (IAF) ಸೂರ್ಯಕಿರಣ್ ಏರೋಬ್ಯಾಟಿಕ್ ತಂಡವು ಏರೋ ಇಂಡಿಯಾ 2023 ರ ಮೂರನೇ ದಿನದಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಪ್ರದರ್ಶನ ನೀಡಿತು.

ಬೆಂಗಳೂರು: ಗುರುವಾರ ಮತ್ತು ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿರುವುದರಿಂದ ಬಳ್ಳಾರಿ ರಸ್ತೆಯನ್ನು ಬಳಸದಂತೆ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ. ಈ ಎರಡು ದಿನಗಳಲ್ಲಿ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ಸಾರ್ವಜನಿಕರಿಗೆ ಮುಕ್ತವಾಗಿದೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಮತ್ತು ಅಲ್ಲಿಂದ ಬರುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು. ಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರು ತಮ್ಮ ವಾಹನಗಳನ್ನು ಜಿಕೆವಿಕೆ ಕ್ಯಾಂಪಸ್ ಅಥವಾ ಜಕ್ಕೂರು ಕ್ಯಾಂಪಸ್‌ನಲ್ಲಿ ನಿಲ್ಲಿಸಬೇಕು ಮತ್ತು ಪ್ರದರ್ಶನದ ಸ್ಥಳಕ್ಕೆ ಹೋಗಲು ಬಿಎಂಟಿಸಿ ಶಟಲ್ ಬಸ್‌ಗಳನ್ನು ಬಳಸಬೇಕು.

ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಬಳ್ಳಾರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳು ಮತ್ತು ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

* ಬೆಂಗಳೂರು-ಬಳ್ಳಾರಿ ರಸ್ತೆಗೆ ಸಂಪರ್ಕ ಕಲ್ಪಿಸುವ ನಾಗೇನಹಳ್ಳಿ ಗೇಟ್‌ನಿಂದ ಆಂಬಿಯನ್ಸ್ ಧಾಬಾ ಕ್ರಾಸ್‌ವರೆಗಿನ ರಸ್ತೆಯಲ್ಲಿ ನಿಷೇಧ ವಿಧಿಸಲಾಗಿದೆ.

* ಮೇಕ್ರಿ ಸರ್ಕಲ್‌ನಿಂದ ದೇವನಹಳ್ಳಿವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ನಿಷೇಧ 

* ಗೊರಗುಂಟೆಪಾಳ್ಯದಿಂದ ಹೆಣ್ಣೂರು ಜಂಕ್ಷನ್‌ವರೆಗಿನ ವರ್ತುಲ ರಸ್ತೆಯಲ್ಲಿ ಸಂಚಾರ ನಿಷೇಧ

* ಬಾಗಲೂರು ಮುಖ್ಯರಸ್ತೆಯಲ್ಲಿ ರೇವಾ ಕಾಲೇಜು ಜಂಕ್ಷನ್‌ನಿಂದ ಬಾಗಲೂರು ಕ್ರಾಸ್‌ವರೆಗೆ ಸಂಚಾರ ನಿಷೇಧ

* ನಾಗವಾರ ಜಂಕ್ಷನ್‌ನಿಂದ ಥಣಿಸಂದ್ರ ಮುಖ್ಯರಸ್ತೆ ಮೂಲಕ ಬಾಗಲೂರು ಜಂಕ್ಷನ್‌ವರೆಗೆ ನಿಷೇಧ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com