
ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾಜಿ ಸಚಿವ ಸಾ.ರಾ ಮಹೇಶ್ ಅವರ ಜೊತೆಗೆ ಸಂಧಾನಕ್ಕೆ ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ. ಈ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಯವರ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ತೀವ್ರವಾಗಿ ಕಿಡಿಕಾರಿದ್ದು, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ 19 ಪ್ರಶ್ನೆಗಳನ್ನು ಕೇಳುವ ಮೂಲಕ ರೋಹಿಣಿ ಸಿಂಧೂರಿ ಈ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರಾ ಎಂಬು ಕೇಳಿದ್ದಾರೆ.
Advertisement