ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಕಸಬಾ ಹೋಬಳಿ ಕೋಳೂರಿನಲ್ಲಿ ನಡೆದಿದೆ.
ಮೃತರನ್ನು ಕೋಳೂರು ನಿವಾಸಿ 35 ವರ್ಷದ ರೂಪ ಮತ್ತು ಆಕೆಯ ಮಗ 9 ವರ್ಷದ ಹೇಮಂತ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿ ಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಹೇಮಂತ್ ಕೃಷಿ ಹೊಂಡದ ಬಳಿ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಮೃತರ ದೇಹಗಳನ್ನು ಸ್ಥಳೀಯರು ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement