ವೈಯಕ್ತಿಕ ತೇಜೋವಧೆ ಸರಿಯಲ್ಲ, ಇದನ್ನು ಇಲ್ಲಿಗೇ ಬಿಡುವುದಿಲ್ಲ, ಗೆಟ್ ವೆಲ್ ಸೂನ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ಬೆಂಗಳೂರು: ತಮ್ಮ ಮೇಲೆ ಐಪಿಎಸ್ ಮಹಿಳಾ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ತಮ್ಮ ನಿವಾಸದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ, ಈ ರೀತಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿಯೊಬ್ಬರು ನನ್ನ ಮೇಲೆ ವೈಯಕ್ತಿಕವಾಗಿ ಕೀಳು ಮಟ್ಟದಲ್ಲಿ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ ಬಿಡಿ, ಹೆಚ್ಚಿಗೆ ಮಾತನಾಡುವುದಿಲ್ಲ, ಬೇಡ, ಗೆಟ್ ವೆಲ್ ಸೂನ್ ಎಂದರು.
ಮಾತನಾಡಲು ಇದು ವೇದಿಕೆಯಲ್ಲ, ಸರಿಯಾದ ಜಾಗವಲ್ಲ, ಸರ್ಕಾರದ ಮಟ್ಟದಲ್ಲಿ ಇದನ್ನು ಗಮನಕ್ಕೆ ತರಬೇಕು, ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ, ಗೆಟ್ ವೆಲ್ ಸೂನ್ ಎಂದಷ್ಟೇ ನಾನು ಹೇಳಬಲ್ಲೆ ಎಂದರು.
ಇದನ್ನು ಇಲ್ಲಿಗೇ ಬಿಡುವ ಪ್ರಶ್ನೆಯಿಲ್ಲ, ಅವರು ತಮ್ಮ ವರ್ತನೆಯನ್ನು ಮುಂದುವರಿಸಿದರೆ ಖಂಡಿತಾ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ವೃತ್ತಿಪರವಾಗಿ ಏನು ಬೇಕಾದರೂ ಮಾತನಾಡಲಿ, ವೈಯಕ್ತಿಕ ವಿಷಯದಲ್ಲಿ ಮಾತನಾಡಿದರೆ ನಾನು ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ನನ್ನ ಪತಿ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹೇಳುತ್ತಿರುವುದೂ ಅದನ್ನೇ, ಮುಂದೆ ಏನು ಮಾಡಬೇಕೋ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ