ಅಪಘಾತದಲ್ಲಿ ಮೃತಪಟ್ಟವರು
ರಾಜ್ಯ
ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!
ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಡ್ಯ: ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಮದ್ದೂರು ತಾಲೂಕು ಗೆಜ್ಜಲಗೆರೆ ಬಳಿ ಇಂದು ಬೆಳಗ್ಗೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.
ಮೃತರನ್ನು 23 ವರ್ಷದ ಸದ್ದಾಂ ಷರೀಫ್ ಹಾಗೂ ಕಾರಿನ ಚಾಲಕ ಶಾಕಿಬ್ ಎಂದು ಗುರುತಿಸಲಾಗಿದೆ. ಮೃತ ಸದ್ದಾಂ ಷರೀಫ್ ಕುಟುಂಬದ 24 ನಸೀರಾ, 20 ವರ್ಷದ ನಿಖತ್ ಹಾಗೂ 26 ವರ್ಷದ ಝಹೀರ್ ಅಪಘಾತದಲ್ಲಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಅಪಘಾತ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ