ರೂಪಾ- ರೋಹಿಣಿಗೆ ಬುದ್ಧಿ ಹೇಳಿ: ಪ್ರಧಾನಿ ಮೋದಿ, ಅಮಿತ್ ಶಾ ಗೆ ಜಗ್ಗೇಶ್ ಮನವಿ

ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಬಹಿರಂಗವಾಗಿ ಕಿತ್ತಾಡಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.
ಜಗ್ಗೇಶ್
ಜಗ್ಗೇಶ್

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಬಹಿರಂಗವಾಗಿ ಕಿತ್ತಾಡಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು, ಐಪಿಎಸ್ ಮತ್ತು ಐಎಎಸ್ ಎರಡೂ ಹುದ್ದೆಗಳು ಜನರಿಗೆ ಮಾರ್ಗದರ್ಶನ ನೀಡುವ ಅತ್ಯಂತ ಜವಾಬ್ದಾರಿ ಸ್ಥಾನಗಳಾಗಿವೆ. ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತೆ ಕೆಲಸ ಮಾಡುತ್ತವೆ. ವೈಯಕ್ತಿಕ ದ್ವೇಷವನ್ನು ಮಾಧ್ಯಮಗಳ ಮುಂದೆ ತರಬಾರದು. ಸಾರ್ವಜನಿಕವಾಗಿ ಘನತೆಯನ್ನು ಕಾಪಾಡಿಕೊಳ್ಳಲು ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುದ್ಧಿ ಹೇಳಬೇಕು ಎಂದು ವಿನಂತಿಸುವುದಾಗಿ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟ್ ಅನ್ನು ಮೋದಿ ಮತ್ತು ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಮಹಿಳಾ ಅಧಿಕಾರಿಗಳ ನಡುವಿನ ಬಹಿರಂಗ ಸಂಘರ್ಷ ಮುಂದುವರೆದಿದ್ದು, ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ರಾಜ್ಯ ಸರ್ಕಾರ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com