ಸಾಂದರ್ಭಿಕ ಚಿತ್ರ
ರಾಜ್ಯ
ಮೈಸೂರು: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು
ಮಹಿಳಾ ಪೊಲೀಸ್ ಕಾನ್ಸ್ಟೇಬಲ್ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಮೈಸೂರು: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಪಟ್ಟವರನ್ನು ಲೇಡಿ ಕಾನ್ಸ್ಟೇಬಲ್ 32 ವರ್ಷದ ಗೀತಾ ಎಂದು ಗುರುತಿಸಲಾಗಿದೆ.
ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ಮೊನ್ನೆ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದರು. ಪತಿ ಹೋಗಿ ಪತ್ನಿ ಗೀತಾಗೆ ಫೋನ್ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ