ದುಬೈ ರಸ್ತೆ ಅಪಘಾತದಲ್ಲಿ ರಾಯಚೂರಿನ ಒಂದೇ ಕುಟುಂಬದ ನಾಲ್ವರು ಸಾವು, ಓರ್ವನ ಸ್ಥಿತಿ ಗಂಭೀರ
ರಾಯಚೂರು: ರಾಯಚೂರು ಜಿಲ್ಲೆಯ ನಾಲ್ವರು ತೀರ್ಥಯಾತ್ರೆಗೆಂದು ದುಬೈಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಮೃತರನ್ನು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಸಿಬ್ಬಂದಿ ಶಫಿ ಸುಳ್ಳೇದ (53), ಅವರ ಪತ್ನಿ ಶಿರಾಜ್ ಬೇಗಂ (47), ಮಗಳು ಶಿಫಾ (20) ಮತ್ತು ತಾಯಿ ಬೀಬಿ ಜಾನ್ (64) ಎಂದು ಗುರುತಿಸಲಾಗಿದೆ.
ಮೃತ ಶಫಿ ಸುಳ್ಳೇದ ಅವರ ಪುತ್ರ ಸಮೀರ್ ತೀವ್ರವಾಗಿ ಗಾಯಗೊಂಡಿದ್ದು, ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಯಚೂರು ಎಸ್‌ಪಿ ಬಿ ನಿಖಿಲ್ ತಿಳಿಸಿದ್ದಾರೆ.
ಫೆಬ್ರುವರಿ 14 ರಂದು ಕುಟುಂಬ ರಾಯಚೂರಿನಿಂದ ಮೆಕ್ಕಾಗೆ ತೆರಳಿತ್ತು. ದುಬೈನಲ್ಲಿ ಮಂಗಳವಾರ (ಫೆಬ್ರುವರಿ 21) ಸಂಜೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ ನಾವು ಕಾಯುತ್ತಿದ್ದೇವೆ ಮತ್ತು ಅಧಿಕಾರಿಗಳು ಸಂತ್ರಸ್ತರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ