ಮೇಖಳಿ ಗ್ರಾಮ ಪಂಚಾಯತ್'ನಲ್ಲಿ ಭ್ರಷ್ಟಾಚಾರ ಆರೋಪ: ಅಧಿಕಾರಿಗಳಿಂದ ತನಿಖೆ ಆರಂಭ

ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಾಂಗಳೆ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಬೆಳಗಾವಿ ಜಿಲ್ಲಾ ಪಂಚಾಯಿತಿ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಾಂಗಳೆ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಬೆಳಗಾವಿ ಜಿಲ್ಲಾ ಪಂಚಾಯಿತಿ ಆದೇಶಿಸಿದೆ.

ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳಡಿ ಕಾಮಗಾರಿಗೆ ಅನುಮೋದನೆ ನೀಡಲು ‘ಕಮಿಷನ್’ ಬೇಡಿಕೆ ಇಡಲಾಗುತ್ತಿದೆ ಎಂದು ರಾಜಾಂಗಳೆ ಆರೋಪಿಸಿದ್ದರು. ಅಲ್ಲದೆ, ಜಿಲ್ಲಾ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದರು.

ವಿವಿಧ ಕಾಮಗಾರಿಗಳಿಗೆ ಮಂಜೂರಾದ ಹಣದಲ್ಲಿ ಶೇ.3ರಷ್ಟು ಕಮಿಷನ್ ನೀಡುವಂತೆ ಮೇಖಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ರಾಜಾಂಗಳೆ ಅವರಿಗೆ ಕಿರುಕುಳ ನೀಡುತ್ತಿದ್ದು, ಆರೋಪ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವಿಸ್ತೃತ ವರದಿ ಪ್ರಕಟಿಸಿತ್ತು.

ಜೆಡಿಎಸ್ ಕೂಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ವರದಿಯನ್ನು ಹಂಚಿಕೊಂಡು, ಸರ್ಕಾರದ ವಿರುದ್ಧ ಕಿಡಿಕಾರಿದ್ದು.

ರಾಜ್ಯದಲ್ಲಿ ಪಂಚಾಯಿತಿ ಮಟ್ಟದ ಆಡಳಿತದ ದಯನೀಯ ಸ್ಥಿತಿಯನ್ನು ವರದಿ ಬಿಂಬಿಸಿದೆ ಎಂದು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಶೇ.30ರಷ್ಟು ಕಮಿಷನ್ ಸಂಗ್ರಹವಾಗುತ್ತಿರುವುದರಿಂದ ಇತರೆಡೆ “ಕಮಿಷನ್ ಕಾಟ” ಇನ್ನೂ ಹೆಚ್ಚಿನ ಮಟ್ಟದಲ್ಲಿ ನಡೆಯುತ್ತಿರಬಹುದು. ತಳಮಟ್ಟದಲ್ಲಿಯೇ ಇಷ್ಟೊಂದು ಭ್ರಷ್ಟಾಚಾರವಿದ್ದರೆ, ಮೇಲ್ಮಟ್ಟದಲ್ಲಿ ಇನ್ನು ಯಾವ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರಬಹುದು. ಇದರಿಂದ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿತ್ತು. ಅಲ್ಲದೆ, ಬಿಜೆಪಿ ವಿರುದ್ಧ ಕಿಡಿಕಾರಿತ್ತು.

ಏತನ್ಮಧ್ಯೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯಾರ್ ಅವರು ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯತ್'ಗೆ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com