ನಿರ್ಮಲಾ ಸೀತಾರಾಮನ್ ಮತ್ತು ಕೃಷ್ಣ ಭೈರೇಗೌಡ
ನಿರ್ಮಲಾ ಸೀತಾರಾಮನ್ ಮತ್ತು ಕೃಷ್ಣ ಭೈರೇಗೌಡ

ಹಸಿರಿನಿಂದ ಕಂಗೊಳಿಸುತ್ತಿದೆ ಕೋಲಾರ, ಬೆಂಗಳೂರು ಗ್ರಾಮಾಂತರ: ಕಾಂಗ್ರೆಸ್- ಬಿಜೆಪಿ ಕ್ರೆಡಿಟ್ ವಾರ್

ಕೋಲಾರ ಮತ್ತು ಚಿಂತಾಮಣಿಯ ದೊಡ್ಡ ಪ್ರದೇಶಗಳು ಈ ವರ್ಷ ಅಸಾಧಾರಣವಾಗಿ ಹಸಿರಾಗಿರುವುದು ನಿಜವಾದರೂ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿವೆ.
Published on

ಬೆಂಗಳೂರು: ಕೋಲಾರ ಮತ್ತು ಚಿಂತಾಮಣಿಯ ದೊಡ್ಡ ಪ್ರದೇಶಗಳು ಈ ವರ್ಷ ಅಸಾಧಾರಣವಾಗಿ ಹಸಿರಾಗಿರುವುದು ನಿಜವಾದರೂ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿವೆ.

ಕರ್ನಾಟಕದ ರಾಜ್ಯಸಭೆ ಸದಸ್ಯೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಾಡಿರುವ ಟ್ವೀಟ್‌, “ಅಂತರ್ಜಲ ಮಟ್ಟ ಗಣನೀಯವಾಗಿ ಹೆಚ್ಚಿದೆ. ಈ ಪ್ರಯತ್ನಗಳು ಗ್ರಾಮೀಣ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಮೂಲಕ ಸುಮಾರು 2 ಮಿಲಿಯನ್ ರೈತರು ಮತ್ತು ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಿವೆ. ಈ ಪ್ರಯತ್ನವನ್ನು ಈಗ ಭಾರತದ ಅನೇಕ ರಾಜ್ಯಗಳು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸುತ್ತಿವೆ ಎಂದು ಬರೆದುಕೊಂಡಿದ್ದಾರೆ.

2ನೇ ಹಂತದಲ್ಲಿ ಕೋಲಾರ ಜಿಲ್ಲೆಯ ಕೋಲಾರ ಮತ್ತು ಚಿಂತಾಮಣಿ ತಾಲೂಕುಗಳಲ್ಲಿ ನಡೆಯುತ್ತಿರುವ ಕೆ ಸಿ ವ್ಯಾಲಿ ಯೋಜನೆಯಡಿಯಲ್ಲಿ ಹೆಚ್ಚುವರಿ 257 ಕೆರೆಗಳನ್ನು ತುಂಬಲು ಲಭ್ಯವಿರುವ ಮೂಲದಿಂದ ವಿವಿಧ ರಿಡ್ಜ್ ಪಾಯಿಂಟ್‌ಗಳಿಗೆ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಎತ್ತುವುದು ಮತ್ತು ಪಂಪಿಂಗ್ ಮಾಡಲಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಬಿಜೆಪಿಯ ಡಬಲ್ ಗೇಮ್‌ಗಳಿಗೆ ಅಂತ್ಯವಿಲ್ಲ. ವಿತ್ತ ಸಚಿವರು ಕರ್ನಾಟಕದ ದೊಡ್ಡ ಪ್ರಮಾಣದ ತ್ಯಾಜ್ಯ ಸಂಸ್ಕರಣೆ ಮತ್ತು ಕೆರೆಗಳನ್ನು ತುಂಬಿಸಲು ಮರುಬಳಕೆ ಮಾಡುವುದನ್ನು ವಿಶ್ವಕ್ಕೆ ಪ್ರದರ್ಶಿಸುತ್ತಿರುವುದು ಭಾರತೀಯ ಸಾಧನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಯೋಜನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸ್ಥಳೀಯ ಬಿಜೆಪಿ ಸದಸ್ಯರು ಹಾಗೂ ಬೆಂಬಲಿಗರು ಅಕ್ರಮವಾಗಿ ಟ್ಯಾಂಕ್‌ಗಳಿಂದ ಜಮೀನಿಗೆ ಪೈಪ್‌ ಹಾಕಿರುವುದು ಅಕ್ರಮವಾಗಿದೆ, ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತುಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಿಂದ ಕೋಲಾರ ಮತ್ತು ಚಿಂತಾಮಣಿಗೆ ದೇವನಹಳ್ಳಿ ಮತ್ತು ಹೊಸಕೋಟೆ ಮೂಲಕ ಹಾದು ಹೋಗುವ ಕೆರೆಗಳು ಭರ್ತಿಯಾಗಿ ಸುತ್ತಮುತ್ತಲಿನ ಪ್ರದೇಶಗಳನ್ನು ಹಸಿರಾಗಿಸಲು ಕಾರಣ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೋರಮಂಗಲ-ಚಲ್ಲಘಟ್ಟ ಕಣಿವೆಯ (ಕೆಸಿ ವ್ಯಾಲಿ) ತ್ಯಾಜ್ಯ ನೀರನ್ನು ಸಂಸ್ಕರಿಸಿ ಪಂಪ್ ಮಾಡುವ ಮೂಲಕ ಈ ಅತ್ಯಂತ ಶುಷ್ಕ ಪ್ರದೇಶಗಳಲ್ಲಿ ಜಲಮೂಲಗಳನ್ನು ತುಂಬಲು ದೂರದೃಷ್ಟಿಯ ಯೋಜನೆಯನ್ನು ಕೈಗೆತ್ತಿಕೊಳ್ಳಲಾಯಿತು ಎಂದು ಅವರು ಹೇಳಿದರು. ಅಂತರ್ಜಲ ಮಟ್ಟವನ್ನು ಸುಧಾರಿಸಲು IISc ಯ ತಾಂತ್ರಿಕ ನೆರವಿನೊಂದಿಗೆ ಕೆಸಿ ವ್ಯಾಲಿ ಲಿಫ್ಟ್-ನೀರಾವರಿ ಯೋಜನೆಯನ್ನು ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com