ಕಲಬುರಗಿ: ಸಿಯುಕೆ ಆವರಣದಲ್ಲಿ ಬೆಂಕಿ ಅವಘಡ: ಮರ, ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮ

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಆವರಣದಲ್ಲಿದ್ದ ಅಪಾರ ಸಸ್ಯ ಸಂಪತ್ತು, ಅಪರೂಪದ ಗಿಡ ಮರಗಳು, ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮವಾಗಿವೆ.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ
Updated on

ಕಲಬುರಗಿ: ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಆವರಣದಲ್ಲಿದ್ದ ಅಪಾರ ಸಸ್ಯ ಸಂಪತ್ತು, ಅಪರೂಪದ ಗಿಡ ಮರಗಳು, ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮವಾಗಿವೆ.

ಹೌದು.. ಕಲಬುರಗಿ ನಗರ ಹೊರವಲಯದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಆವರಣದಲ್ಲಿ ಸಸ್ಯ ಸಂಪತ್ತು, ಗಿಡ ಮರಗಳು ನಾಶವಾಗಿ ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮವಾಗಿವೆ.

ಕಿಡಿಗೇಡಿಗಳ ಕೃತ್ಯ?
ಇನ್ನು ‘ವಿಶ್ವವಿದ್ಯಾಲಯ ಆವರಣದ ಎಸ್‌ಟಿಪಿ, ಪಿಬಿಸಿ ವಸತಿ ಮತ್ತು ಕೆರೆ ಸಮೀಪದ ಒಣ ಹುಲ್ಲಿಗೆ ಸೋಮವಾರ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಉದ್ದೇಶ ಪೂರ್ವಕವಾಗಿ ಮತ್ತು ವ್ಯವಸ್ಥಿತವಾಗಿ ಬೆಂಕಿ ಹಚ್ಚಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಇಂತಹ ಕೃತ್ಯ ನಡೆಯುತ್ತಿವೆ’ ಎಂದು ಸಿಯುಕೆ ಬಸವ ಪೀಠದ ಸಂಯೋಜಕ ಡಾ. ಗಣಪತಿ ಬಿ ಸಿನ್ನೂರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ಈ ವರ್ಷ ಜೆಸಿಬಿ, ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಒಣಹುಲ್ಲು ಕತ್ತರಿಸಲಾಗುತ್ತಿದೆ. ಆದರೆ, ಕೆಲವು ಕಿಡಿಗೇಡಿಗಳು ಮೂರು ದಿನಗಳಿಂದ ಬೆಂಕಿ ಹಚ್ಚುತ್ತಿದ್ದು, ನೀರಿನ ಟ್ಯಾಂಕರ್ ತರಿಸಿ ಬೆಂಕಿ ನಂದಿಸಲಾಗುತ್ತಿದೆ. ಸೋಮವಾರ ಏಕಕಾಲದಲ್ಲಿ ಮೂರು ಕಡೆ ಬೆಂಕಿಹಚ್ಚಿದರಿಂದ ಬೆಂಕಿಯ ಕೆನ್ನಾಲಿಗೆ 4–5 ಅಡಿ ಎತ್ತರ ಚಾಚಿಕೊಂಡಿದೆ. ಇದರಿಂದ ಸೋಲಾರ್ ಪ್ಲಾಂಟ್, ಕಾಂಪೌಂಡ್, ಎಸ್‌ಟಿಪಿ, ಪಿಬಿಸಿ ವಸತಿ, ಕೆರೆ ಸಮೀಪದ ಮರಗಳು ಸುಟ್ಟಿವೆ. ಪ್ರಾಣಿ– ಪಕ್ಷಿಗಳು ಸುಟ್ಟು ಭಸ್ಮವಾಗಿರುವ ಸಾಧ್ಯತೆ ಇದೆ. ತಕ್ಷಣವೇ ಪೊಲೀಸ್ ಮತ್ತು ಅರಣ್ಯ ಇಲಾಖೆಯ ಗಮನಕ್ಕೆ ತರಲಾಗುವುದು ಎಂದರು.

ಪ್ರಾಣಿ–ಪಕ್ಷಿಗಳು ಸುಟ್ಟು ಭಸ್ಮ
ಅಂತೆಯೇ, 'ಆವರಣದಲ್ಲಿ ಮೊಳಕಾಲುದ್ದ ಬೆಳೆದಿರುವ ಹುಲ್ಲಿನ ನಡುವೆ ಹುಳು ಹುಪ್ಪಟಗಳು, ಕಪ್ಪೆಗಳು, ಹಾವುಗಳು, ಓತಿಕೇತ, ಮಿಡತೆಗಳು, ಚಿಟ್ಟೆಗಳು, ನೆಲದೊಳಗೆ ಇರುವೆಗಳು, ಗೆದ್ದಲು ಗೂಡು ಕಟ್ಟಿವೆ. ಇವೆಲ್ಲವೂ ಬೆಂಕಿಗೆ ಆಹುತಿಯಾಗಿವೆ. ಕ್ಯಾಂಪಸ್‌ನಲ್ಲಿ ಪದೇ ಪದೇ ಬೆಂಕಿ ಕಾಣಿಸಿಕೊಂಡು, ಅದರ ಹೊಗೆ ಸುತ್ತಲಿನ ವಸತಿ ಪ್ರದೇಶಗಳಲ್ಲಿ ಹರಡುತ್ತಿದೆ. ಬೆಂಕಿ ನಿಯಂತ್ರಣಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮುಂದಾಗುತ್ತಿಲ್ಲ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com