ಮಂಡ್ಯದಲ್ಲಿ ಡಿಸೆಂಬರ್ ನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಡಾ.ಮಹೇಶ್ ಜೋಷಿ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು.
ಡಾ.ಮಹೇಶ್ ಜೋಷಿ
ಡಾ.ಮಹೇಶ್ ಜೋಷಿ
Updated on

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಸಮ್ಮೇಳನ‌ ಆಯೋಜನೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 87 ಕನ್ನಡ ಪುಸ್ತಕ ಬಿಡುಗಡೆಗೊಳಿಸಲಾಗುವುದು. ಕನ್ನಡದ 87 ಸಾಧಕರನ್ನು ಸನ್ಮಾನಿಸಲಾಗುವುದು. ಸಮ್ಮೇಳನಕ್ಕೂ ಮೊದಲು ಕಾರ್ಯಕ್ರಮಕ್ಕೆ ಪ್ರಚಾರ ನೀಡಲು  ಭುವನೇಶ್ವರಿ ಭಾವಚಿತ್ರವುಳ್ಳ ಕನ್ನಡ ರಥದ ಮೆರವಣಿಗೆಯನ್ನು ಆಯೋಜಿಸಬೇಕು  ನಡೆಸಬೇಕು ಎಂದರು. 

ಹಾವೇರಿಯಲ್ಲಿ ಐತಿಹಾಸಿಕ ಸಮ್ಮೇಳನ ನಡೆಸಿದ್ದೇವೆ. ಜೊತೆಗೆ ಹಾವೇರಿಯಲ್ಲಿ ಆದ ಲೋಪದೋಷಗಳು ಮಂಡ್ಯದಲ್ಲಿ ಆಗಬಾರದು ಎನ್ನುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿಬೇಕಿದೆ. ಮುಂದಿನ ತಿಂಗಳಿನಿಂದಲೇ ಸಿದ್ಧತೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 9 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಕನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಪುಸ್ತಕ ಮಾರಾಟ ಸಂದರ್ಭದಲ್ಲಿ ಆನಲೈನ್ ಮೂಲಕ ವಹಿವಾಟು ನಡೆಸಲು ತೊಡಕಾಗಿತ್ತು. ಈ ಬಾರಿ ಇದನ್ನು ಸರಿಪಡಿಸಿಕೊಳ್ಳಬೇಕು ಎಂದರು.

ಮೂಲಭೂತ ಸೌಲಭ್ಯಗಳಾದ  ಕುಡಿಯುವ ನೀರು, ಶೌಚಾಲಯ, ವಸತಿ ಗೃಹ, ಆಹಾರ ಇವುಗಳ ಬಗ್ಗೆ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಲಾಗುವುದು. ತಂತ್ರಜ್ಞಾನದ ಅಳವಡಿಕೆ ಜತೆಗೆ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುವುದು, ಕನಿಷ್ಠ 150 ಎಕರೆ ಇರುವ ಸ್ಥಳವನ್ನು  ಗುರುತಿಸಿದರೆ ಸಮ್ಮೇಳನ ಆಯೋಜನೆಗೆ ಉತ್ತಮವಾಗಿರುತ್ತದೆ. ಮೂರು ವೇದಿಕೆ, ಪಾರ್ಕಿಂಗ್ ವ್ಯವಸ್ಥೆ, ಅಡುಗೆ ಮನೆ, ಮಾರಾಟ ಮಳಿಗೆಗಳು ತಾತ್ಕಾಲಿಜ ಶೌಚಾಲಯಗಳನ್ನು ನಿರ್ಮಾಣ ಮಾಡಬಹುದು. ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ಆಯೋಜನೆ ಮಾಡಬೇಕು ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ  ಮಾತನಾಡಿ, ಈ ಹಿಂದೆ ನಡೆದಿರುವ ಎಲ್ಲಾ ಸಮ್ಮೇಳನಕ್ಕಿಂತ ಉತ್ತಮವಾಗಿ  ಹೊಸ ದಾಖಲೆ ಸೃಷ್ಟಿ ಮಾಡುವ ರೀತಿ ಸಮ್ಮೇಳವನ್ನು ಆಯೋಜಿಸೋಣ, ಇದಕ್ಕೆ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com