ರಾಜ್ಯ

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ದುರ್ಮರಣ ಹೊಂದಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ.

ರಾಯಚೂರಿನಿಂದ ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ ಹೋಗಿದ್ದು, ಹೀಟರ್ ನ್ನು ಮೈ ಮೇಲೆ ಬೀಳಿಸಿಕೊಂಡಿದ್ದಾನೆ.

ಇದರಿಂದ ವಿದ್ಯುತ್ ಪ್ರವಹಿಸಿ ಒದ್ದಾಡುತ್ತಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಗೂ ವಿದ್ಯುತ್ ತಗುಲಿ ಮೃತಪಟ್ಟಿದ್ದಾರೆ. ಜ್ಯೋತಿ ಪತಿ ಸಂಜೆ ಮನೆಗೆ ಮರಳಿದಾಗ ಘಟನೆ  ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.