ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆ 

ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. 
ಸಿದ್ದೇಶ್ವರ ಸ್ವಾಮೀಜಿ
ಸಿದ್ದೇಶ್ವರ ಸ್ವಾಮೀಜಿ
Updated on

ವಿಜಯಪುರ:ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. 

ಜ.03 ರ ಮಧ್ಯಾಹ್ನದವರೆಗೂ ಶ್ರೀಗಳ ದರ್ಶನಕ್ಕೆ ಭಕ್ತಾದಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಕನಿಷ್ಠ 10 ಲಕ್ಷ ಮಂದಿ ದರ್ಶನ ಪಡೆಯುವ ನಿರೀಕ್ಷೆ ಇದೆ.

ಸಂಜೆ 5 ಗಂಟೆಗೆ ವೇಳೆಗೆ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಕಳೆದ 3-4 ದಿನಗಳಿಂದ ಶ್ರೀಗಳು ಅನಾರೋಗ್ಯಕ್ಕೀಡಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com