ಕೈದಿಗಳಿಗೆ 'ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್‌' ಆರಂಭಿಸಲು ರಾಜ್ಯ ಸರ್ಕಾರ ಮುಂದು!

ಕರ್ನಾಟಕ ಕಾರಾಗೃಹ ಇಲಾಖೆಯು ತನ್ನ ಸುಧಾರಣಾ ಮತ್ತು ಪುನರ್ವಸತಿ ಉಪಕ್ರಮಗಳ ಭಾಗವಾಗಿ ರಾಜ್ಯದಲ್ಲಿ ಜೈಲಿನ ಆವರಣದೊಳಗೆ ಕೈದಿಗಳಿಗಾಗಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಪ್ರಾರಂಭಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಕಾರಾಗೃಹ ಇಲಾಖೆಯು ತನ್ನ ಸುಧಾರಣಾ ಮತ್ತು ಪುನರ್ವಸತಿ ಉಪಕ್ರಮಗಳ ಭಾಗವಾಗಿ ರಾಜ್ಯದಲ್ಲಿ ಜೈಲಿನ ಆವರಣದೊಳಗೆ ಕೈದಿಗಳಿಗಾಗಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಪ್ರಾರಂಭಿಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಕಾರಾಗೃಹಗಳು ಮತ್ತು ತಿದ್ದುಪಡಿ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, “ಕೆಲವು ಹೋಟೆಲ್ ನಿರ್ವಹಣಾ ಸಂಸ್ಥೆಗಳು ಈ ಸಂಬಂಧ ನಮ್ಮನ್ನು ಸಂಪರ್ಕಿಸಿವೆ. ಅವರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಪಾವಧಿಯ ಕೋರ್ಸ್‌ಗಳನ್ನು ಜೈಲಿನ ಆವರಣದಲ್ಲಿ ನಡೆಸಲಾಗುತ್ತದೆ. “ಕೈದಿಗಳು ಜೈಲಿನಿಂದ ಹೊರಬಂದ ನಂತರ ಗೌರವಯುತ ಜೀವನವನ್ನು ನಡೆಸಬೇಕೆಂಬುದು ನಮ್ಮ ಬಯಕೆಯಾಗಿದೆ. ಅವರು ಸ್ವಯಂ ಉದ್ಯೋಗಿಗಳಾಗಬೇಕೆಂದು ನಾವು ಬಯಸುತ್ತೇವೆ. ಕೋರ್ಸ್ ಬಳಿಕ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ, ನಾವು ವಯಸ್ಕರ ಸಾಕ್ಷರತೆಯಿಂದ ದೂರ ಶಿಕ್ಷಣದವರೆಗೆ ಅನೇಕ ಶಿಕ್ಷಣ-ಸಂಬಂಧಿತ ಕೋರ್ಸ್‌ಗಳನ್ನು ನೀಡುತ್ತಿದ್ದೇವೆ. ಅನಕ್ಷರಸ್ಥರಾಗಿ ಬರುವ ಖೈದಿಗಳು ಸಾಕ್ಷರರಾಗಿ ಹೊರಬರಲು ಸಹಾಯ ಮಾಡಲಾಗುತ್ತಿದೆ, ಇದು ಅವರಿಗೆ ಸ್ವಾವಲಂಬಿಯಾಗಲು ಸಹಾಯ ಮಾಡುತ್ತದೆ" ಎಂದಿದ್ದಾರೆ.

ಕೋರ್ಸ್‌ಗಳು ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ವಿವಿಧ ಭಕ್ಷ್ಯಗಳ ಸಿದ್ಧ ಪಡಿಸುವುದು ಮತ್ತು ಅತಿಥಿಗಳಿಗೆ ಬಡಿಸುವ ತರಬೇತಿಯನ್ನು ಒಳಗೊಂಡಿರುತ್ತದೆ. ಇದರಿಂದ ಜೈಲಿನಿಂದ ಹೊರಹೋದ ಬಳಿಕ ಅವರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಬಹುದು ಅಥವಾ ದೊಡ್ಡ ಹೋಟೆಲ್‌ಗಳಲ್ಲಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ಆಸಕ್ತರಿಗೆ ಮಾತ್ರ ಈ ಕೋರ್ಸ್‌ಗಳ ಲಭ್ಯವಿರಲಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com