ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ: ಸಿಎಂ ಬೊಮ್ಮಾಯಿ

ಮಹದಾಯಿ ಯೋಜನೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಹದಾಯಿ ಯೋಜನೆ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ಮಹದಾಯಿ ವಿಚಾರದಲ್ಲಿ ಉದ್ದೇಶಿತ ಕಾಂಗ್ರೆಸ್ ಸಮಾವೇಶದ ಕುರಿತು ಸುದ್ದಿಕಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ನನ್ನ "ರಕ್ತದಲ್ಲಿ ಬರೆದ ಪತ್ರ" ದಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದ ಅವಧಿಯಲ್ಲಿ 5.5 ಕಿ.ಮೀ ಉದ್ದದ ಕಾಲುವೆ ನಿರ್ಮಿಸಲಾಗಿದೆ ಎಂದು ಹೇಳಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಏನು ಮಾಡಿದೆ? ಒಂದು ಹನಿ ನೀರನ್ನು ಬೇರೆಯವರಿಗೆ ಹರಿಸುವುದಿಲ್ಲ ಎಂದು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಗೋವಾದಲ್ಲಿ ಚುನಾವಣಾ ಪ್ರಚಾರದ ವೇಳೆ ಘೋಷಿಸಿದ್ದರು.

ಬಿಜೆಪಿ ಆಡಳಿತಾವಧಿಯಲ್ಲಿ ನಿರ್ಮಿಸಿದ ರಾಜಕಾಲುವೆಗೆ ಕಾಂಗ್ರೆಸ್ ಸರ್ಕಾರ ಗೋಡೆ ನಿರ್ಮಿಸಿದೆ. ಕರ್ನಾಟಕಕ್ಕೆ ಮಹದಾಯಿ ನೀರು ತರುವಲ್ಲಿ ಕಾಂಗ್ರೆಸ್ ಹೇಗೆ ಎಡವಿತು ಎಂಬುದನ್ನು ಇದು ತೋರಿಸುತ್ತದೆ ಎಂದು ತಿಳಿಸಿದರು.

ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ಮಾತನಾಡಿ, ರಾಜ್ಯಗಳ ಮರುಸಂಘಟನೆಯ ಮೊದಲು ಸಾಕಷ್ಟು ವರದಿಗಳು ಬಂದಿವೆ. ನಂತರವೇ ಕಾಯಿದೆ ಅಂತಿಮಗೊಳಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com