ಬೀದಿ ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿದ ವ್ಯಕ್ತಿ; ಎಫ್‌ಐಆರ್ ದಾಖಲಿಸಿದ ಪೊಲೀಸರು

ಬೆಂಗಳೂರು ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಘಟನೆ ಜನವರಿ 7 ರಂದು ನಡೆದಿದ್ದು, ಈ ಭೀಕರ ದೃಶ್ಯದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇತ್ತೀಚೆಗೆ ಘಟನೆ ಬೆಳಕಿಗೆ ಬಂದಿದೆ.

ರಸ್ತೆಯ ಮಧ್ಯದಲ್ಲಿ ಮಲಗಿದ್ದ ಬೀದಿ ನಾಯಿ, ಕಾರು ತನ್ನ ಕಡೆಗೆ ಬರುತ್ತಿದೆ ಎಂದು ತಿಳಿದು ಅಲ್ಲಿಂದ ತೆರಳಲು ಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಆದರೆ, ಕಾರು ಚಾಲಕ, ನಾಯಿ ದೂರ ಹೋಗುವುದನ್ನು ಗಮನಿಸಿದ ನಂತರ, ವೇಗವನ್ನು ಹೆಚ್ಚಿಸುತ್ತಾನೆ ಮತ್ತು ಉದ್ದೇಶಪೂರ್ವಕವಾಗಿ ನಾಯಿಯ ಮೇಲೆ ಕಾರು ಹರಿಸುತ್ತಾನೆ.

ಈ ವೇಳೆ ನಾಯಿ ಸ್ಥಳದಲ್ಲೇ ಸಾವಿಗೀಡಾಗಿದೆ. ನಾಯಿಗೆ ಸಹಾಯ ಮಾಡಲು ಸ್ಥಳೀಯರು ಮಾಡಿದ ಪ್ರಯತ್ನ ವ್ಯರ್ಥವಾಗಿದೆ. ಕಾರು ಚಾಲಕ ಹಾರ್ನ್ ಮಾಡಿದ್ದರೆ ಅಥವಾ ಸ್ವಲ್ಪ ವೇಗ ತಗ್ಗಿಸಿದ್ದರೆ ನಾಯಿ ದೂರ ಸರಿಯುತ್ತಿತ್ತು ಎನ್ನುತ್ತಾರೆ ಸ್ಥಳೀಯರು.

ಪೊಲೀಸರು ಕಾರಿನ ನೋಂದಣಿ ಸಂಖ್ಯೆ (KA 05 MP 5836) ಗುರುತಿಸಿ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com