ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯ ಪಟು ಶವ ಪತ್ತೆ

ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟುವೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟುವೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೆ.ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಘಟನೆ ನಡೆದಿದ್ದು, ಶ್ರೀನಾಥ್ ಎಂಬ ದೇಹದಾರ್ಢ್ಯ ಪಟುವಿನ ಮೃತ ದೇಹ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಮೂಲಗಳ ಪ್ರಕಾರ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದ ಶ್ರೀನಾಥ್, ಓದಿನ ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು.

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ನಿನ್ನೆ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶ್ರೀನಾಥ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Related Stories

No stories found.

Advertisement

X
Kannada Prabha
www.kannadaprabha.com