
ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ.
ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಇಂದು ಬೆಂಗಳೂರಿನಿಂದ ಯಾದಗಿರಿಗೆ ತೆರಳಲು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ವೇಳೆ ದಿಢೀರ್ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಅಸ್ತಂತರಾಗಿದ್ದಾರೆ.
ಫೆಬ್ರವರಿ 25ರಂದು ತಮ್ಮ ಪಟ್ಟಾಧಿಕಾರ ಮಹೋತ್ಸವ ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಬಿ.ವೈ ವಿಜಯೇಂದ್ರ ಅವರಿಗೆ ಆಹ್ವಾನ ನೀಡಲು ಬೆಂಗಳೂರಿಗೆ ಆಗಮಿಸಿದ್ದರು.
Advertisement