ಜ.15ರಂದು ಸೇನಾ ದಿನ: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜನೆ, ಪರೇಡ್, ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

ಜನವರಿ 15 ರಂದು ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಯಿಂದ ಹೊರಗೆ ಅಂದರೆ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್‌ನ್ನು ಆಯೋಜಿಸಲಾಗುತ್ತಿದೆ.
ಕರ್ನಾಟಕ ಮತ್ತು ಕೇರಳ ಉಪ ವಲಯದ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಮೇಜರ್‌ ಜನರಲ್‌ ರವಿ ಮುರುಗನ್‌
ಕರ್ನಾಟಕ ಮತ್ತು ಕೇರಳ ಉಪ ವಲಯದ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಮೇಜರ್‌ ಜನರಲ್‌ ರವಿ ಮುರುಗನ್‌
Updated on

ಬೆಂಗಳೂರು: ಜನವರಿ 15 ರಂದು ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಯಿಂದ ಹೊರಗೆ ಅಂದರೆ ಬೆಂಗಳೂರಿನಲ್ಲಿ ಸೇನಾ ದಿನದ ಪರೇಡ್‌ನ್ನು ಆಯೋಜಿಸಲಾಗುತ್ತಿದೆ.

ಸೇನಾ ದಿನದ ಪರೇಡ್‌ನ್ನು ಎಂಇಜಿ (ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್) ಕೇಂದ್ರದಲ್ಲಿ ನಡೆಸಲಾಗುತ್ತಿದ್ದು, ಇದರ ಸಿದ್ಧತೆಗಳು ಭರದಿಂದ ಸಾಗಿವೆ.

ದೇಶದ ಎಲ್ಲ ಪ್ರಮುಖ ಸ್ಥಳಗಳಲ್ಲಿ ಮಹತ್ವದ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಸರ್ಕಾರ ಸೂಚಿಸಿತ್ತು. ಹೀಗಾಗಿ, ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ.

ಸೇನಾ ದಿನದಂದು ಸುಮಾರು 500 ಯೋಧರಿಂದ ಆಕರ್ಷಕ ಪಥ ಸಂಚಲನ ನಡೆಯಲಿದೆ. ಜತೆಗೆ ‘ಟಿ–90’ ಟ್ಯಾಂಕ್‌ಗಳು, 155ಎಂ.ಎಂ. ಬೊಫೋರ್ಸ್‌ ಗನ್‌ ಸೇರಿದಂತೆ ಸೇನೆಯ ಸಾಮರ್ಥ್ಯ ಬಿಂಬಿಸುವ ವಿವಿಧ ಯುದ್ಧ ಟ್ಯಾಂಕ್‌ಗಳು, ರೇಡಾರ್‌ಗಳ ಪ್ರದರ್ಶನವೂ ನಡೆಯಲಿದೆ. ಜ.15ರ ಸಂಜೆ ನಡೆಯುವ ‘ಮಿಲಿಟರಿ ಟ್ಯಾಟೂ’ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕ ಮತ್ತು ಕೇರಳ ಉಪ ವಲಯದ ಜನರಲ್‌ ಆಫೀಸರ್‌ ಕಮಾಂಡಿಂಗ್‌ ಮೇಜರ್‌ ಜನರಲ್‌ ರವಿ ಮುರುಗನ್‌ ಅವರು ಈ ಸಂಬಂಧ ಮಾಹಿತಿ ನೀಡಿದ್ದು, ದೆಹಲಿಯಿಂದ ಹೊರಗೆ ಆಯೋಜಿಸುತ್ತಿರುವ ಈ ರಾಷ್ಟ್ರೀಯ ಕಾರ್ಯಕ್ರಮದ ಆತಿಥ್ಯ ವಹಿಸಲಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ಸೇನೆಯ ಬಗ್ಗೆ ಕರ್ನಾಟಕದ ಜನರು ಅಪಾರ ಗೌರವ ಹೊಂದಿದ್ದಾರೆ ಮತ್ತು ಇಂತಹ ಕಾರ್ಯಕ್ರಮಗಳನ್ನು ವೀಕ್ಷಿಸಲು ಉತ್ಸುಕರಾಗಿದ್ದಾರೆ. ಪಥಸಂಚಲನದ ಸಂದರ್ಭದಲ್ಲಿ ಧ್ರುವ ಮತ್ತು ರುದ್ರ ಹೆಲಿಕಾಪ್ಟರ್‌ಗಳ ಪ್ರದರ್ಶನವು ನಡೆಯಲಿದೆ ಎಂದು ವಿವರಿಸಿದ್ದಾರೆ.

ಅಂದು ಮದ್ರಾಸ್‌ ಎಂಜಿನಿಯರಿಂಗ್‌ ಯುದ್ಧ ಸ್ಮಾರಕದಲ್ಲಿ ಸೇನಾ ಪಡೆ ಮುಖ್ಯಸ್ಥ ಮೇಜರ್‌ ಜನರಲ್‌ ಮನೋಜ್‌ ಪಾಂಡೆ ಅವರು ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ನಂತರ, ಪಥಸಂಚಲನ ವೀಕ್ಷಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶೌರ್ಯ ಪ್ರಶಸ್ತಿ ಹಾಗೂ ಅಸಾಧಾರಣ ಕಾರ್ಯಕ್ಷಮತೆ ತೋರಿದ ಘಟಕಗಳಿಗೆ ಪ್ರಶಂಸಾ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಿದ್ದಾರೆ’ ಎಂದು ತಿಳಿಸಿದರು.

‘ಕಳೆದ ವಾರ ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌ಗಳು, ರಕ್ಷಣಾ ಪಡೆಗಳ ಯೋಧರ ಕುಟುಂಬದ ಸದಸ್ಯರು ಸೇರಿದಂತೆ ಸಾರ್ವಜನಿಕರಿಗೆ ಪಥಸಂಚಲನದ ತಾಲೀಮು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಸುಮಾರು 11 ಸಾವಿರ ಮಂದಿ ಈ ಪಥಸಂಚಲನ ವೀಕ್ಷಿಸಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com