ಮೈಸೂರು: ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಇಂದು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ಗುರುರಾಜ್ ಸೋಮಕ್ಕಲವರ್ ಅವರು ಆರೋಪಿಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಗಾಗಿ ಬಲೆ ಬೀಸಿದ ಮೈಸೂರು ಪೊಲೀಸರು ನಿನ್ನೆ ಗುಜರಾತ್ ನಲ್ಲಿ ಬಂಧಿಸಿದ್ದರು.
Advertisement