ಬೆಂಗಳೂರು: ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ; ರೌಡಿ ಅರೆಸ್ಟ್

ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

‘ಗೋವಿಂದರಾಜನಗರದ ಮನು, ಅಪರಾಧ ಹಿನ್ನೆಲೆಯುಳ್ಳವ. ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಈತನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಇತ್ತೀಚೆಗೆ ಈತನನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘2022ರಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿಯಾಗಿದ್ದ ಮನು, ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ಜ. 9ರಂದು ವಿಶ್ವೇಶ್ವರಯ್ಯ ಬಡಾವಣೆಯ ಮಂಗನಹಳ್ಳಿ ಕೆರೆ ಬಳಿ ಮನು ಅಡಗಿದ್ದ ಮಾಹಿತಿ ಸಿಕ್ಕಿತ್ತು. ಪಿಎಸ್‌ಐ ಮೌನೇಶ್ ಬಡಗಿ, ಹೆಡ್ ಕಾನ್‌ಸ್ಟೆಬಲ್‌ಗಳಾದ ಕುಮಾರ್, ಮಹಾಲಿಂಗಯ್ಯ ಸ್ಥಳಕ್ಕೆ ಹೋಗಿದ್ದರು.’ ಈ ವೇಳೆ ಆರೋಪಿ ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com