ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.
ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ ನಡೆದಿದೆ.
ವೈದ್ಯಕೀಯ ಪರೀಕ್ಷೆ ಬಳಿಕ ರವಿಯನ್ನು ವರ್ಗಾವಣೆ, ವೇಶ್ಯಾವಾಟಿಕೆ ಸಂಬಂಧ ಸಿಐಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಪೊಲೀಸರು ಆತ ತನ್ನೆಲ್ಲಾ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದ ಶೇಷಾದ್ರಿಪುರಂ ಅಪಾರ್ಟ್ ಮೆಂಟ್ ನ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.
ಇದೇ ವೇಳೆ ರವಿ ವಿರುದ್ಧ ದೂರು ದಾಖಲಿಸಿದ್ದ ಆತನ 2ನೇ ಪತ್ನಿ ಸಹ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಡಿವೈಎಸ್ ಪಿ ನರಸಿಂಹಮೂರ್ತಿ ಹಾಗೂ ಮಹಿಳಾ ಅಧಿಕಾರಿ ನೇತೃತ್ವದಲ್ಲಿ ರವಿ ಪತ್ನಿಯ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
Advertisement