74ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣಿಕ್ ಷಾ ಪರೇಡ್‌ನಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆ, ಜನತೆಗೆ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್‌ನಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೇರವೇರಿಸಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್‌ನಲ್ಲಿ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೇರವೇರಿಸಲಿದ್ದಾರೆ.

ಮಾಣಿಕ್ ಷಾ ಪರೇಡ್‌ ಮೈದಾನದ ಪೂರ್ವ ಭಾಗದಲ್ಲಿ ಧ್ವಜಾರೋಹಣಕ್ಕೆ ವೇದಿಕೆ ಸಜ್ಜಾಗಿದೆ. ಕಾರ್ಯಕ್ರಮದಲ್ಲಿ 38 ಕಲಾ ತಂಡಗಳ 1520 ಜನ ಭಾಗಿಯಾಗುತ್ತಿದ್ದಾರೆ. 7 ಸಾವಿರ ಮಂದಿ ಸಾರ್ವಜನಿಕರಿಗೆ ಪೆರೇಡ್ ವೀಕ್ಷಿಸಲು ಅವಕಾಶ ನೀಡಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಪ್ರಜಾಪ್ರಭುತ್ವದ ಆಶಯಗಳನ್ನು ಸಾಕಾರಗೊಳಿಸಿ, ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com